ಪಂಜ: ಮೈಸೂರು ವಿಭಾಗ ಮಟ್ಟದ ಕಬಡ್ಡಿ -ಹೊನಲು ಬೆಳಕಿನ ಪಂದ್ಯಾಟ ಉದ್ಘಾಟನೆ

0

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸುಳ್ಯ ತಾಲೂಕು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಪಂಜ ಇವರ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ-2022 ನ.18 ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜು ನ ಕೋಟಿ ಚೆನ್ನಯ ಕ್ರೀಡಾಂಗಣದ.ಬೇರ್ಯ ಜಾನಕಿ ‌ಮತ್ತು ಪಟೇಲ್ ಕುಶಾಲಪ್ಪ ಗೌಡ ವೇದಿಕೆಯಲ್ಲಿ ಉದ್ಘಾಟನೆ ಗೊಂಡು ಸಂಜೆ ಹೊನಲು ಬೆಳಕಿನ ಪಂದ್ಯಾಟ ಉದ್ಘಾಟನೆ ಕಾರ್ಯಕ್ರಮ ಜರುಗಿತು.

ಐವರ್ನಾಡು ಪ್ರಾಥಮಿಕ ಕೃಷಿ ವತಿನ ಸಹಕಾರ ಸಂಘದ ಅಧ್ಯಕ್ಷ ಎಸ್ ಎನ್ ಮನ್ಮಥ ಹೊನಲು ಬೆಳಕಿನ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ
“ವಿದ್ಯಾರ್ಥಿಗಳಿಗೆ ಕ್ರೀಡಾ ಆಸಕ್ತಿ ಇದ್ದರೆ ಮಾತ್ರ ಉತ್ತಮ ಕ್ರೀಡಾಪಟುಗಳಾಗಿ ಬೆಳೆಯಲು ಸಾಧ್ಯ. ಇಂದು ಗ್ರಾಮೀಣ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಕ್ರೀಡಾ ಪ್ರತಿಭೆಗಳನ್ನು ಉತ್ತಮವಾಗಿ ಪ್ರದರ್ಶಿಸುತ್ತಿದ್ದಾರೆ”.ಎಂದು ಅವರು ಹೇಳಿದರು.ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಮಾಧವ ಬಿ ಕೆ ಸಭಾಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿ ರಾಷ್ಟ್ರೀಯ ಅಥ್ಲೆಟಿಕ್ಸ್ ತರಬೇತುದಾರ ರಾಧಾಕೃಷ್ಣ ಹೆಚ್ ಬಿ ಮಾತನಾಡಿ “ಪಂಜ ಜೂನಿಯರ್ ಕಾಲೇಜು ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಮಾತ್ರ 400 ಮೀಟರ್ ಇದೆ. ಮುಂದೆ ಇದು ಸಿಂಥೆಟಿಕ್ ಟ್ರ್ಯಾಕ್ ಆಗ ಬೇಕು. ಇನ್ನಷ್ಟು ಅಭಿವೃದ್ಧಿ ಕೆಲಸ ಆಗಬೇಕು. ಹಳ್ಳಿಯ ಪ್ರತಿಭೆಗಳಿಗೆ ಅವಕಾಶ ಸಿಗಲು ಇಲ್ಲಿ ಕ್ರೀಡಾ ಹಾಸ್ಟೇಲ್ ಆಗ ಬೇಕು.ಅದಕ್ಕಾಗಿ ಜನಪ್ರತಿನಿಧಿಗಳು ,ಸರ್ಕಾರ ಸಹಕರಿಸಬೇಕು ” ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಗುತ್ತಿಗಾರು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಅಧ್ಯಕ್ಷ, ಜಿಲ್ಲಾ ಸಹಕಾರಿ ರತ್ನ ಪುರಸ್ಕೃತ ನಿತ್ಯಾನಂದ ಮುಂಡೋಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ , ಮಂಗಳೂರು ಭೂ ದಾಖಲೆಗಳ ನಿವೃತ್ತ ಉಪ ನಿರ್ದೇಶಕ ಬಿ ಕೆ ಕುಸುಮಾಧರ , ರಾಜ್ಯ ವಾಲಿಬಾಲ್ ಅಸೋಸಿಯೇಷನ್ಉ ಪಾಧ್ಯಕ್ಷ, ನ್ಯಾಯವಾದಿ ಜಯಪ್ರಕಾಶ್ ರೈ, ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್, ಪ್ರಗತಿಪರ ಕೃಷಿಕರಾದ ಶಿವರಾಮಯ್ಯ ಕರ್ಮಾಜೆ, ಶ್ರೇಯಂಸ್ ಕುಮಾರ್ ಶೆಟ್ಟಿಮೂಲೆ, ಕುಶಾಲಪ್ಪ ಗೌಡ ದೊಡ್ಡಮನೆ, ಕಡಬ ತಾಲೂಕು ಪಡುಬೆಟ್ಟು ಸ.ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕಮಲ ಕೆ ಚಿದ್ಗಲ್ಲು, ಪಂಜ ಗ್ರಾಮ ಪಂಚಾಯತ್ ಪೂರ್ವಾಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು, ಬೆಳ್ಳಾರೆ ಕೆ ಪಿ ಎಸ್ ಉಪಪ್ರಾಂಶುಪಾಲೆ ಶ್ರೀಮತಿ ಉಮಾ ಕುಮಾರಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕೇನ್ಯ ರವೀಂದ್ರನಾಥ ಶೆಟ್ಟಿ, ನಿವೃತ್ತ ಶಿಕ್ಷಕ ಸೀತಾರಾಮ ಗೌಡ ಕುದ್ವ, ಮೈಸೂರು ಆವೆಂಚುರ ಆರ್ಗನಿಕ ವ್ಯವಸ್ಥಾಪಕ ನಿರ್ದೇಶಕ ಡಾ.ವಿಶುಕುಮಾರ್ ಬಿ ಕೆ, ಸುಳ್ಯ ತಾಲೂಕು ಪಂಚಾಯತ್ ಪೂರ್ವಾಧ್ಯಕ್ಷೆ ಶ್ರೀಮತಿ ಸುವರ್ಣಿನಿ ಎನ್ ಎಸ್, ಪಂಜ ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಹಾಗೂ
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್ , ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲು, ಎಸ್ ಡಿ ಎಂ ಸಿ ಅಧ್ಯಕ್ಷ ಗಣೇಶ ಜೋಯಿಸ, ಪಂಜ ಜೂನಿಯರ್ ಕಾಲೇಜು ಕೋಟಿ ಚೆನ್ನಯ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿನ್ನಪ್ಪ ಕಾಣಿಕೆ , ಪ್ರಾಂಶುಪಾಲ ವೆಂಕಪ್ಪ ಗೌಡ ಕೇನಾಜೆ , ವಿವಿಧ ಪದಾಧಿಕಾರಿಗಳು, ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸನ್ಮಾನ:
ರಾಷ್ಟ್ರೀಯ ಅಥ್ಲೆಟಿಕ್ಸ್ ತರಬೇತುದಾರ , ಕ್ರೀಡಾಂಗಣ ಅಭಿವೃದ್ಧಿಗೆ ಸಹಕರಿಸಿದ ರಾಧಾಕೃಷ್ಣ ಹೆಚ್ ಬಿ, ಸಾಲೆತ್ತೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ,ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಮಾಧವ ಬಿ ಕೆ ರವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವೆಂಕಪ್ಪ ಕೇನಾಜೆ ಸ್ವಾಗತಿಸಿದರು. ತೀರ್ಥಾನಂದ ಕೊಡೆಂಕಿರಿ ನಿರೂಪಿಸಿದರು. ಯೋಗೀಶ್ ಚಿದ್ಗಲ್ಲು ವಂದಿಸಿದರು.