ಪೆರುವಾಜೆಯಲ್ಲಿ ತಹಶೀಲ್ದಾರರ ಉಪಸ್ಥಿತಿಯಲ್ಲಿ ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ

0

ತಾಲೂಕು ಆಡಳಿತ ಸುಳ್ಯ , ತಾಲೂಕು ತಹಶೀಲ್ದಾರರೊಂದಿಗೆ ತಾಲೂಕಿನ ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ನ.19 ರಂದು ಪೆರುವಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.


ತಹಶೀಲ್ದಾರ್ ಅನಿತಾಲಕ್ಷ್ಮೀ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮ ವಾಸ್ತವ್ಯದ ಉದ್ದೇಶ,ಮತ್ತು ಸರಕಾರದ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಫಲಾನುಭವಿಗಳಿಗೆ ಸವಲತ್ತು ವಿತರಣೆಯ ಮಂಜೂರಾತಿ ಆದೇಶ ಪತ್ರ ವಿತರಣೆ ನಡೆಯಿತು.


ಉಪತಹಶೀಲ್ದಾರ್ ಚಂದ್ರಕಾಂತರವರು ಫಲಾನುಭವಿಗಳ ಪಟ್ಟಿಯ ವಿವರ ನೀಡಿದರು. ನಂತರ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ ನಡೆಯಿತು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ, ತಾಲೂಕು ಆರೋಗ್ಯಾಧಿಕಾರಿ ಡಾ.
ನಂದಕುಮಾರ್, ಸಿ.ಡಿ.ಪಿ.ಒ ಶ್ರೀಮತಿ ರಶ್ಮಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಸಮಾಜ ಕಲ್ಯಾಣಾಧಿಕಾರಿ ರವಿಕುಮಾರ್, ಪುತ್ತೂರು ಆರ್.ಎಫ್.ಒ ಕಿರಣ್, ಮುಕ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ದಯಾಕರ ಆಳ್ವ, ಗ್ರಾಮ ಪಂಚಾಯತ್ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಪದ್ಮನಾಭ ಶೆಟ್ಟಿ ಪೆರುವಾಜೆ , ಮಾಧವ ಮುಂಡಾಜೆ, ಶ್ರೀಮತಿ ರೇವತಿ, ಶ್ರೀಮತಿ ಗುಲಾಬಿ, ಶಹಿನಾಜ್ ಉಪಸ್ಥಿತರಿದ್ದರು.
ಪಂಚಾಯತ್ ಸಿಬ್ಬಂದಿ ಜಯಲಕ್ಷ್ಮಿ ಪ್ರಾರ್ಥಿಸಿ, ಸಚಿನ್ ರಾಜ್ ಶೆಟ್ಟಿ ಸ್ವಾಗತಿಸಿ, ಗ್ರಾಮ ಲೆಕ್ಕಾಧಿಕಾರಿ ತಿಪ್ಪೇಶಪ್ಪ ಕಾರ್ಯಕ್ರಮ ನಿರೂಪಿಸಿದರು.
ಇಲಾಖೆಗಳ ಇಲಾಖಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.