’ವರ್ಣಚಿತ್ತಾರ’ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

0


ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ಸ್ ಸುಳ್ಯ, ರೋಟರಿ ಸುಳ್ಯ, ಇಂಟರ್‍ಯಾಕ್ಟ್ ಕ್ಲಬ್ ರೋಟರಿ ಶಾಲೆ, ಮತ್ತು ಸುದ್ದಿ ಬಿಡುಗಡೆ ಪತ್ರಿಕೆ, ಸುದ್ದಿ ವೆಬ್‌ಸೈಟ್, ಸುದ್ದಿ ಚಾನೆಲ್ ಇದರ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಸುಳ್ಯ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ವರ್ಣ ಚಿತ್ತಾರ ಸ್ಪರ್ಧೆಯು ನ. ೧೩ರಂದು ಸುಳ್ಯ ರೋಟರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದಿದ್ದು, ಇದರಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ನ.19 ರಂದು ಸುಳ್ಯದ ರಂಗ ಮಯೂರಿ ಕಲಾ ಶಾಲೆಯಲ್ಲಿ ನಡೆಯಿತು.


ಸುಳ್ಯ ಸುದ್ದಿ ಬಿಡುಗಡೆಯ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ಕರ್ನಾಟಕ ಜರ್ನಾಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ರಂಗ ಮಯೂರಿ ಕಲಾ ಶಾಲೆಯ ಸಂಚಾಲಕ ಲೋಕೇಶ್ ಊರುಬೈಲು ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದ್ದರು
.

ಸಂಘಟಕರಾದ ಶ್ರೀಹರಿ ಪೈಂದೋಡಿ, ಮತ್ತು ಪ್ರಸನ್ನ ಐವರ್ನಾಡು ಉಪಸ್ಥಿತರಿದ್ದು, ಸಹಕರಿಸಿದರು.