ಸುಳ್ಯ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಎನ್‌ಸಿಸಿ ನೌಕದಳದ ಉದ್ಘಾಟನಾ ಸಮಾರಂಭ

0

ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆ ಸುಳ್ಯ ಇಲ್ಲಿ ನ. ೧೯ ರಂದು ಎನ್‌ಸಿಸಿ ನೌಕದಳ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾಸಂಘ ಸುಳ್ಯ ಇದರ ನಿರ್ದೇಶಕರಾದ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರು ಆದ ಶ್ರೀಮತಿ ತಂಗಮ್ಮ ಕೆ ಎಸ್ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಅರುಣ್ ಪ್ರಸಾದ್ ರೈ NCC officer, ಕ್ಯಾಸಿಯಾ ಪ್ರೌಡಶಾಲೆ ಜೆಪ್ಪು ಮಂಗಳೂರು ಇವರು ಉದ್ಘಾಟಿಸಿದರು. ಗೌರವ ಉಪಸ್ಥಿತಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್ ಪಿ ಮಹಾದೇವ ರವರು ಎನ್‌ಸಿಸಿ ಕೊಠಡಿಯನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿ ಸ್ಥಾನದಲ್ಲಿ ಕೆ.ಎಸ್.ಎಸ್.ಕಾಲೇಜು ಸುಬ್ರಮಣ್ಯ ಇಲ್ಲಿನ ಆಂಗ್ಲ ಭಾಷಾ ಸಹಾಯಕ ಪ್ರಾಧ್ಯಪಕರಾದ ಡಾII ಗೋವಿಂದ ಎನ್ ಎಸ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ಸಮವಸ್ತ್ರವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ ರವರು ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ.ಪಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. NCC ANO  ಶ್ರೀಮತಿ ಅರ್ಪಣಾರವರು ವಂದನಾರ್ಪಣೆಗೈದರು. ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಗಾಯಾತ್ರಿ ಸಿ ಎನ್ ರವರು ನಿರೂಪಿಸಿದರು.