ಕೇರ್ಪಳ – ಬೂಡು ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಕೆಲಸ ಆರಂಭ

0

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕೇರ್ಪಳ ಬೂಡು ವಾರ್ಡಿನ ರಸ್ತೆ ಕಾಂಕ್ರೀಟ್ ಕಾಮಗಾರಿ ಕೆಲಸ ಆರಂಭಗೊಂಡಿದೆ. ಕಳೆದ ಹಲವಾರು ವರ್ಷಗಳ ಬೇಡಿಕೆಯಾಗಿರುವ ಈ ರಸ್ತೆಯ ಕಾಂಕ್ರೀಟಿಕರಣಕ್ಕೆ ಮೀನುಗಾರಿಕೆ ಬಂದರು ಒಳನಾಡು ಜಲಸಾರಿಗೆ ಸಚಿವಎಸ್.ಅಂಗಾರರವರ ರೂ.20 ಲಕ್ಷ ವಿಶೇಷ ಅನುದಾನದಲ್ಲಿ ಸುಮಾರು 320 ಮೀಟರ್ ನಷ್ಟು ಕಾಮಗಾರಿ ಕೆಲಸ ಪ್ರಗತಿಯಲ್ಲಿದೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ ಯವರ ಶಿಫಾರಸ್ಸಿನ ಮೇರೆಗೆ ಹಾಗೂ ನಗರ ಪಂಚಾಯತ್ ನಾಮ ನಿರ್ದೇಶನ ಸದಸ್ಯ‌ ಬೂಡು ರಾಧಾಕೃಷ್ಣ ರೈ, ಸುನಿಲ್ ಕೇರ್ಪಳ ರವರು ಮುತುವರ್ಜಿ ವಹಿಸಿದ್ದರು. ಗುತ್ತಿಗೆದಾರ ಮಂಜುನಾಥ ಪ್ರಭು ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದಾರೆ.