ಬಳ್ಪ ಗ್ರಾ.ಪಂ.ನಲ್ಲಿ ಅಧಿಕಾರಿಗಳ ಗ್ರಾಮ ವಾಸ್ತವ್ಯ

0

ಕಡಬ ತಾಲೂಕು ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನ. 19 ರಂದು ಬಳ್ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ವಿಶ್ವ ಸೌಚಾಲಯ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಬಳ್ಪ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಲಲಾ ಸೂಂತಾರು ಮತ್ತು ಸದಸ್ಯರು, ಗ್ರಾ.ಪಂ. ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.