ಎಣ್ಮೂರು ಸರಕಾರಿ ಪ್ರೌಢ ಶಾಲಾ ನೂತನ ಕೊಠಡಿ ರಚನೆಗೆ ಸಚಿವರಿಂದ ಶಂಕುಸ್ಥಾಪನೆ

0

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು ಇದಕ್ಕೆ ಕರ್ನಾಟಕ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ನ. 14ರಂದು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಸರಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆನ್ನು ನೀಡುತ್ತಿದ್ದು ಈ ವರ್ಷ ವಿವೇಕ ಯೋಜನೆಯಡಿ 8100 ತರಗತಿ ಕೊಠಡಿಯನ್ನು ಮಂಜೂರು ಮಾಡಿದೆ. ಅದರಲ್ಲಿ ಎರಡು ಕೊಠಡಿಗಳನ್ನು ಎಣ್ಮೂರು ಪ್ರೌಢಶಾಲೆಗೆ ನೀಡಲಾಗಿದೆ. ಇದರ ಕಾಮಗಾರಿ ಶೀಘ್ರವಾಗಿ ಮುಗಿದು ಮಕ್ಕಳಿಗೆ ಇದರ ಪ್ರಯೋಜನ ಸಿಗಬೇಕು ಮತ್ತು ಯಾವುದೇ ಕಾರಣಕ್ಕೂ ಇದರ ಗುಣಮಟ್ಟದಲ್ಲಿ ಲೋಪವಾಗದಂತೆ ನೋಡಿಕೊಳ್ಳುವಲ್ಲಿ ಎಲ್ಲರೂ ಗಮನ ಹರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುರುಳ್ಯ ಗ್ರಾ.ಪಂ. ಅಧ್ಯಕ್ಷೆ ಕು. ಜಾನಕಿ ಮುರುಳ್ಯ, ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ , ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು.ಕೆ. ಎಸ್. ಡಿ.ಎಂ.ಸಿ. ಅಧ್ಯಕ್ಷ ಪದ್ಮನಾಭ ಗೌಡ ಪೂದೆ ಮತ್ತು ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ ಸ್ವಾಗತಿಸಿ ಕನ್ನಡ ಭಾಷಾ ಶಿಕ್ಷಕಿ ಶ್ರೀಮತಿ ಉಷಾ ಕೆ.ಎಸ್. ವಂದಿಸಿದರು.