ಸಾವಿತ್ರಿ ಕಣೆಮರಡ್ಕರವರಿಗೆ ಅಭಿನಂದನಾ ಕಾರ್ಯಕ್ರಮ

0

ಮಂಡೆಕೋಲು ಗ್ರಾ.ಪಂ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕರವರಿಗೆ ಅಭಯ ಚಾರಿಟೇಬಲ್ ಟ್ರಸ್ಟ್ ಶೇಡಿಗುಡ್ಡೆ ಮಂಗಳೂರು ವತಿಯಿಂದ ಅತ್ಯುತ್ತಮ ಗ್ರಂಥಾ ಪಾಲಕಿ ಪ್ರಶಸ್ತಿಗೆ ಭಾಜನರಾದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮವು ನ.20 ರಂದು ಮಂಗಳೂರಿನ ಯುನಿರ್ವಸಿಟಿ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯಾದವ ಕೇಂದ್ರ ಸಮಿತಿಯ ಅಧ್ಯಕ್ಷ ಎ.ಕೆ.ಮಣಿಯಾಣಿ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಸದಾನಂದ ಕಾವೂರು, ಮುಖ್ಯಕಾರ್‍ಯನಿರ್ವಹಣಾಧಿಕಾರಿ ಕುಮಾರ್, ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪಿ.ನಾರಾಯಣ ಮಣಿಯಾಣಿ, ನಿವೃತ್ತ ಪ್ರಾಂಶುಪಾಲ ಶ್ರೀಧರ್, ಅಭಯ ಟ್ರಸ್ಟ್ ಅಧ್ಯಕ್ಷ ಗೋಪಾಲ ಮಣಿಯಾಣಿ ಮೊದಲಾದವರು ಉಪಸ್ಥಿತರಿದ್ದರು.