ನ.26-27: ಕನಕಮಜಲಿನಲ್ಲಿ ಗುರುದೇವ ಲಲಿತಕಲಾ ಅಕಾಡೆಮಿಯ ವತಿಯಿಂದ ಮೇದಿನಿ ಉತ್ಸವ

0

ಗುರುದೇವ ಲಲಿತಕಲಾ ಅಕಾಡೆಮಿಯ ವತಿಯಿಂದ ಮೂರ್ಜೆ ಮುತ್ತಣ್ಣ ಗೌಡ ಮತ್ತು ಶ್ರೀಮತಿ ನಳಿನಿ ಮುತ್ತಣ್ಣ ಸ್ಮರಣಾರ್ಥ ಗ್ರಾಮೀಣ ಪ್ರದೇಶಗಳಲ್ಲಿ ಶಾಸ್ತ್ರೀಯ ನೃತ್ಯ ಕಲಾ ಪ್ರಕಾರಗಳ ಜಾಗೃತಿಗಾಗಿ ಮೇದಿನಿ ಉತ್ಸವವವು ಕನಕಮಜಲಿನ ಕನಕಕಲಾ ಗ್ರಾಮದಲ್ಲಿ ನ.26 ಮತ್ತು ನ.27ರಂದು ಕನಕಮಜಲಿನ ಕನಕಕಲಾ ಗ್ರಾಮದಲ್ಲಿ ಜರುಗಲಿದೆ.
ಕಾರ್ಯಕ್ರಮವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟಿಸಲಿದ್ದಾರೆ. ಮೂರ್ಜೆ ಮೂರ್ಕಜೆ ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ಅಧ್ಯಕ್ಷ ಕೆ.ಎಸ್. ಗೋಪಾಲಕೃಷ್ಣ ಗೌಡ ಮೂರ್ಜೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್, ತಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಪುತ್ತೂರು ಎಸ್.ಡಿ.ಪಿ. ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕ ಡಾ. ಹರಿಕೃಷ್ಣ ಪಣಾಜೆ, ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಭಾಗವಹಿಸಲಿದ್ದಾರೆ.
ನ.27ರಂದು ಸಮಾರೋಪ ಸಮಾರಂಭದಲ್ಲಿ ಗುರುದೇವ ಲಲಿತಕಲಾ ಅಕಾಡೆಮಿಯ ಕಲಾ ನಿರ್ದೇಶಕಿ ಡಾ. ಚೇತನ ರಾಧಾಕೃಷ್ಣ ಪಿ.ಎಂ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಶ್ರೀ ಗಣೇಶ್ ಕ್ಯಾಶ್ಯೂಸ್ ನ ಶ್ರೀಮತಿ ಪದ್ಮಾವತಿ ಉಪೇಂದ್ರ ಕಾಮತ್, ಜೇನುಕೃಷಿ ತಜ್ಞ ಕುಮಾರ್ ಪೆರ್ನಾಜೆ, ಕನಕಮಜಲು ಯುವಕ ಮಂಡಲದ ಅಧ್ಯಕ್ಷ ಚಂದ್ರಶೇಖರ ನೆಡಿಲು, ಕನಕಮಜಲಿನ ಸ್ವರ್ಣ ಮಹಿಳಾ ಮಂಡಳಿ ಅಧ್ಯಕ್ಷೆ ಶ್ರೀಮತಿ ಸುಶೀಲ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಭರತನಾಟ್ಯ, ಶಾಸ್ತ್ರೀಯ ಕಲಾ ಪ್ರದರ್ಶನಗಳು ನಡೆಯಲಿದೆ.