ಸುಳ್ಯ ಅಮರ ಸಂಘಟನಾ ಸಮಿತಿಯ ವತಿಯಿಂದ ರಕ್ತದಾನ ಶಿಬಿರ

0


ಸುಳ್ಯ ತಾಲೂಕು ಅಮರ ಸಂಘಟನಾ ಸಮಿತಿ ಇದರ ಆಶ್ರಯದಲ್ಲಿ ಕೆ.ವಿ.ಜಿ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರವು ನಡೆಯಿತು.
ಕೆ.ವಿ.ಜಿ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಕಾರ್ಯಕಾರಿ ನಿರ್ದೇಶಕ ಅಕ್ಷಯ್ ಕೆ.ಸಿ ದೀಪ ಬೆಳಗಿಸಿ ಉದ್ಘಾಟಿಸಿದರು.


ಅಮರ ಸಂಘಟನಾ ಸಮಿತಿ ಆಧ್ಯಕ್ಷ ಪ್ರವೀಣ್ ಕುಲಾಲ್ ಮತ್ತು ಸದಸ್ಯರು ,ನ್ಯಾಯವಾದಿ ಪ್ರದೀಪ್ ಕುಮಾರ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯ ವ್ಯವಸ್ಥಾಪಕ ಶಿವಪ್ರಸಾದ್ ಕೆಂಬಾರೆ,ಮುಖ್ಯಕಾರ್ಯನಿರ್ವಾಹಕಅಭಿಯಂತರರ ಸಾಯಿರಾಂ. ಡಿ, ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 15ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.
ರಕ್ತ ನಿಧಿಕೇಂದ್ರದ ಸಿಬ್ಬಂದಿ ಕೃತಿಕಾ ಕದಿಕಡ್ಕ ಮತ್ತು ಪವನ್ ರವರು ಸಹಕರಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು.