ಬಳ್ಪ ಗ್ರಾ.ಪಂ.ನಲ್ಲಿ ಮಹಿಳಾ ಗ್ರಾಮಸಭೆ

0

ಬಳ್ಪ ಗ್ರಾ.ಪಂ.ನಲ್ಲಿ ಮಹಿಳಾ ಗ್ರಾಮ ಸಭೆ, ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ನ. 22ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಕಲಾ ಸೂಂತಾರುರವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪುಷ್ಪಾ.ಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕರಾದ ಭರತ್ ರಾಜ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾರಾಯಣ ಬಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪಂಜ ವಲಯದ ಮೇಲ್ವಿಚಾರಕಿ ಶ್ರೀಮತಿ ರವಿಶ್ರೀ ಬಳ್ಪ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2023-24 ನೇ ಸಾಲಿನ ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ, ಜಲಸಂಜೀವಿನಿ ಕಾರ್ಯಕ್ರಮ
ಮತ್ತು ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಕಾರ್ಯಕ್ರಮ ನಡೆಯಿತು.
ಸ್ತ್ರೀ ಶಕ್ತಿ ಸಂಘ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು, ಗ್ರಾ ಪಂ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.