ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯು ನ-23ರಂದು ಮಂಗಳೂರಿನ ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯ ಮಂಗಳೂರು ಇಲ್ಲಿ ನಡೆದಿದ್ದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಶ್ರೀಪ್ರಸಾದ್ ಎಂ ಹಾಗೂ ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ವೀಣಾ ಎಸ್ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಶ್ವ ಏಡ್ಸ್ ನಿರ್ಮೂಲನಾ ದಿನದ ಪ್ರಯುಕ್ತ ನಡೆಸಿರುವ ಈ ಸ್ಪರ್ಧೆಯು ಹೆಚ್ ಐ ವಿ ಏಡ್ಸ್ ತಡೆಗಟ್ಟುವಿಕೆ ಹಾಗೂ ನಿಯಂತ್ರಣ, ಸೇವೆ-ಸೌಲಭ್ಯ , ಕಳಂಕ, ತಾರತಮ್ಯ, ಉಚಿತ ರಾಷ್ಟ್ರೀಯ ಸಹಾಯ ವಾಣಿ, ರಕ್ತದಾನ, ಹೆಚ್ ಐ ವಿ-ಟಿ ಬಿ, ಹೆಚ್ ಐ ವಿ ಕಾಯ್ದೆ ಎಂಬಿತ್ಯಾದಿ ವಿಷಯಗಳ ಬಗ್ಗೆ ಈ ರಸಪ್ರಶ್ನೆ ನಡೆದಿತ್ತು. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಒಟ್ಟು 25 ಕಾಲೇಜಿನಿಂದ 50 ಸ್ಪರ್ಧಿಗಳು ಈ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು.