ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

0
25

ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ನ. 23ರಂದು ಸಂಜೆ ನಡೆಯಿತು. ಭಕ್ತಾದಿಗಳು ಆಗಮಿಸಿ ದೇವಳದ ಸುತ್ತ ದೀಪ ಹಚ್ಚಿದರು. ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸಂಪ್ಯಾಡಿ ಮತ್ತು ಶ್ರೀ ತ್ರಿಶೂಲಿನೀ ಮಹಿಳಾ ಭಜನಾ ತಂಡ ಕಾಂಜಿ ಇವರಿಂದ ಭಜನಾ ಸಂಕೀರ್ತನೆ ನಡೆಯಿತು.

p>

ದೇವಳದ ಅನುವಂಶಿಕ ಆಡಳಿತ ಮೊಕ್ತೇಸರರಾದ ಎಂ.ವಿ. ಶ್ರೀವತ್ಸ ಕಾಂಜಿ,‌ ಉತ್ಸವ ಸಮಿತಿ ಅಧ್ಯಕ್ಷ ಸದಾನಂದ ರೈ ಅರ್ಗುಡಿ, ಗೌರವಾಧ್ಯಕ್ಷ ಭಾಸ್ಕರ ಗೌಡ ಪಂಡಿ‌ ಸೇರಿದಂತೆ ಬೈಲುವಾರು ಸಮಿತಿಗಳ ಸಂಚಾಲಕರು, ಸದಸ್ಯರು ಊರ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here