ಸಂಪಾಜೆ ಗ್ರಾ. ಪಂ. ಸದಸ್ಯ ಸೋಮಶೇಖರ್ ಕೊಯಿಂಗಾಜೆ ರಾಜೀನಾಮೆ

0
2

ಸಂಪಾಜೆ ಗ್ರಾಮ ಪಂಚಾಯತ್ ನ ಸದಸ್ಯ ಸೋಮಶೇಖರ್ ಕೊಯಿಂಗಾಜೆಯವರು ಪಂಚಾಯತ್ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ರಾಗಿರುವ ಸೋಮಶೇಖರ ಕೊಯಿಂಗಾಜೆಯವರು ಕಳೆದ 25 ವರ್ಷಗಳಿಂದ ದ ಕ ಸಂಪಾಜೆ ವಲಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ , ಪ್ರಸ್ತುತ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅವರು ತಮ್ಮ ರಾಜಿನಾಮೆ ಪತ್ರವನ್ನು ಇಂದು ಪಂಚಾಯತ್ ಅಧ್ಯಕ್ಷ ಜಿ ಕೆ ಹಮೀದ್ ರವರಿಗೆ ಕಳುಹಿಸಿರುತ್ತಾರೆ ಎಂದು ತಿಳಿದುಬಂದಿದೆ.

ಈ ಕುರಿತು ಸುದ್ದಿಯೊಂದಿಗೆ ಮಾತನಾಡಿದ ಸೋಮಶೇಖರ್ ರವರು ವೈಯುಕ್ತಿಕ ಕಾರಣಗಳಿಂದ ನಾನು ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದು ಯಾವುದೇ ಸಮಸ್ಯೆಯಿಂದ ಅಲ್ಲ ಎಂದು ಹೇಳಿದ್ದಾರೆ. ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಲು ನನ್ನ ಎಲ್ಲಾ ಆತ್ಮೀಯ ಮಿತ್ರರು ಮತ್ತು ಪಕ್ಷದ ಕಾರ್ಯಕರ್ತರು ತಾಲೂಕು ಮಟ್ಟದ ಮತ್ತು ಜಿಲ್ಲಾಮಟ್ಟದ ರಾಜ್ಯಮಟ್ಟದ ನಾಯಕರುಗಳು ನನಗೆ ಬೆಂಬಲವನ್ನು ನೀಡಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವ ಕುರಿತು ಸಹಕಾರಿ ಸಂಘದ ಶತಮಾನೋತ್ಸವದ ಬಳಿಕ ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದರು.

LEAVE A REPLY

Please enter your comment!
Please enter your name here