ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

0

ಕೆ ಎಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆ ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ನ. 23ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ವಿದ್ಯಾ ಸಂಸ್ಥೆಯ ನಿರ್ದೇಶಕರಾದ ವಮಾರ ಸ್ವಾಮಿ ಕೆ ಎಸ್ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು. ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ರೈ ಪಾದೆಕಲ್ಲು ಮುಖ್ಯ ಅತಿಥಿಯಾಗಿ ಭಾಗವಹಿಸಿ ಕ್ರೀಡಾ ಪಟುಗಳ ಗೌರವ ವಂದನೆ ಸ್ವೀಕರಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಚಿದಾನಂದ ಕಲ್ಲೇರಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭ ಗೊಂಡ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಪ್ರಿಯಾ ಎಂ ವಂದಿಸಿದರು. ಜೀವಶಾಸ್ತ್ರ ಉಪನ್ಯಾಸಕ ಜೀವನ್ ಎಸ್.ಎಚ್ ಕಾರ್ಯಕ್ರಮ ನಿರೂಪಿಸಿದರು. ಭೌತಶಾಸ್ತ್ರ ಉಪನ್ಯಾಸಕ ಉಜ್ವಲ್ ಕೆ.ಎಚ್ ಕ್ರೀಡಾ ಕೂಟವನ್ನು ಸಂಘಟಿಸಿದರು. ಕ್ರೀಡಾ ಪಟುಗಳಾದ ಜೀವನ್ ಮತ್ತು ವರ್ಷಿನಿ ಎಸ್ ಕ್ರೀಡಾ ಜ್ಯೋತಿಯನ್ನು ತಂದರು. ಕ್ರೀಡಾ ಕಾರ್ಯದರ್ಶಿ ಜೀವನ್ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಇವರು ಕ್ರೀಡಾ ಕೂಟದ ಪ್ರತಿಜ್ಞಾ ವಿಧಿಯನ್ನು ಪೂರೈಸಿದರು. ಉಪನ್ಯಾಸಕಿಯರಾದ ನಿಶಾ ಬಿ ಎಸ್, ಧನ್ಯ ಕೆ ವಿ, ಜಯಶ್ರೀ ಪಿ. ವಿ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು.