ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವಾರ್ಷಿಕ ಮಹಾಸಭೆ

0

ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ 7 ನೇ ವಾರ್ಷಿಕ ಮಹಾಸಭೆಯು ಸುಳ್ಯ ಶಿವಕೃಪಾ ಕಲಾ ಮಂದಿರದಲ್ಲಿ ನ.24 ರಂದು ಸಂಘದ ಅಧ್ಯಕ್ಷ ಗಿರಿಧರ ಸ್ಕಂದ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಎಸ್.ಪಿ.ಲೋಕನಾಥ್, ಜಿ.ಎ.ಮಹಮ್ಮದ್, ಶರತ್ ಕುಮಾರ್ ಅಲೆಕ್ಕಾಡಿ, ಕಾರ್ಯದರ್ಶಿ ಜಯಪ್ರಕಾಶ್ ಉಪಸ್ಥಿತರಿದ್ದರು.


ಸಂಘದ ವತಿಯಿಂದ ಹಮ್ಮಿಕೊಂಡ ಕಬಡ್ಡಿ ಪಂದ್ಯಾಟದ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮದ ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ವಾರ್ಷಿಕ ವರದಿಯನ್ನು ‌ಸಭೆಗೆ ಮಂಡಿಸಲಾಯಿತು.
ಈ ಸಂದರ್ಭದಲ್ಲಿ ಮುಂದಿನ ವರ್ಷದ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.