ಕೇನ್ಯ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಸಚಿವ ಎಸ್. ಅಂಗಾರರಿಂದ ಗುದ್ದಲಿ ಪೂಜೆ

0

ಬಳ್ಪ ಗ್ರಾ.ಪಂ. ವ್ಯಾಪ್ತಿಯ ಕೇನ್ಯ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಮಂಜೂರಾದ
ರೂ.60 ಲಕ್ಷ ಅನುದಾನದ ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರ ನ. 25 ಗುದ್ದಲಿ ಪೂಜೆ ನೆರವೇರಿಸಿದರು.

ಬಳ್ಪ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಕಲಾ ಸೂಂತಾರು, ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಶ್ರೀಮತಿ ಕುಸುಮ ಎಸ್. ರೈ ಸದಸ್ಯರಾದ ರಾಜೀವ ಕಣ್ಕಲ್, ಹರ್ಷಿತ್ ಕಾರ್ಜ ಪಂಜ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ಉಪಾಧ್ಯಕ್ಷ ರಘುನಾಥ ರೈ ಕೆರೆಕ್ಕೋಡಿ, ನಿರ್ದೇಶಕರಾದ ಶ್ರೀಕೃಷ್ಣ ಭಟ್ ಪಠೋಳಿ, ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ ಕೇನ್ಯ ಇದರ ಅಧ್ಯಕ್ಷ ವಿನೋದ್ ಬೊಳ್ಮಲೆ, ಸ್ಥಳೀಯರಾದ ಅರುಣ್ ರೈ ಗೆಜ್ಜೆ ಬಳ್ಪ ಗ್ರಾ.ಪಂ. ಮಾಜಿ ಸದಸ್ಯರಾದ ರಮಾನಂದ ಎಣ್ಣೆಮಜಲು, ಧರ್ಮಪಾಲ ಕಣ್ಕಲ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.