ಇ.ಎಲ್.ಸಿ ಪ್ರಬಂಧ ಸ್ಪರ್ಧೆಯಲ್ಲಿ ಭೂಮಿಕಾ ಬಿ.ಪಿ. ರಾಜ್ಯ ಮಟ್ಟಕ್ಕೆ

0


ಮತದಾರರ ಸಾಕ್ಷರತಾ ಸಂಘ ನಡೆಸುವ ನಾನಾ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗಹಿಸಿದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿಯ ವಿದ್ಯಾರ್ಥಿನಿ ಭೂಮಿಕಾ ಬಿ.ಪಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಿಯಾಗಿದ್ದಾರೆ. ಉಪ ಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಹಾಗೂ ಇ.ಎಲ್.ಸಿ ನೋಡಲ್ ಪೂರ್ಣಿಮಾ ಟಿ ಇವರನ್ನು ಸ್ಪರ್ಧೆಗೆ ತಯಾರುಗೊಳಿಸಿದ್ದರು.