ಬೆಳ್ಳಾರೆಯಲ್ಲಿ ಪಂಚಾಯತ್ ಮಟ್ಟದ ಗ್ರಾಮೀಣ ಕ್ರೀಡಾಕೂಟ

0

ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ನಡೆದ ಗ್ರಾಮ ಪಂಚಾಯತ್ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ ಎನ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಕ್ರೀಡಾಕೂಟದ ನೋಡಲ್ ಅಧಿಕಾರಿ ದೇವರಾಜ್ ಮುತ್ಲಾಜೆ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ, ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯ, ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮತ್ತು ಸದಸ್ಯರು,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಕ್ರೀಡಾಕೂಟದ ಫಲಿತಾಂಶ

ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಅಮರಮುಡ್ನೂರು, ದ್ವಿತೀಯ ಕೊಡಿಯಾಲ ಪಂಚಾಯತ್, ಖೋ ಖೋ ಪಂದ್ಯಾಟದಲ್ಲಿ ಪ್ರಥಮ ಐವರ್ನಾಡು, ದ್ವಿತೀಯ ಬೆಳ್ಳಾರೆ ಪಂಚಾಯತ್ ಪಡೆದುಕೊಂಡಿತು.
ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಬೆಳ್ಳಾರೆ, ದ್ವಿತೀಯ ಐವರ್ನಾಡು ,ಖೋ ಖೋ ಪಂದ್ಯಾಟದಲ್ಲಿ ಪ್ರಥಮ ಐವರ್ನಾಡು, ದ್ವಿತೀಯ ಬೆಳ್ಳಾರೆ ಗ್ರಾ.ಪಂ.ಪಡೆದುಕೊಂಡಿತು.