ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಏಕಕಾಲದಲ್ಲಿ ಸಂವಿಧಾನದ ಪೀಠಿಕೆ ಪಠಣ

0


ಕೆ ವಿ ಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಭಾರತದ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಜ್ಞಾ ಕೆ.ಸಿ ಸಂವಿಧಾನದ ಪೀಠಿಕೆ ಯನ್ನು ವಾಚಿಸಿದರು, ವಿದ್ಯಾರ್ಥಿಗಳು ಅದನ್ನು ಅನುಸರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ,ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.