ಸುಳ್ಯ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ

0

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ನ.26 ರಂದು ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಂಟನೇ ತರಗತಿ ರಿಸೋನ್ ಡಿಸೋಜ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಂಟನೇ ತರಗತಿ ಸಂಕೃತಿ ಮತ್ತು ಫಾತಿಮಾತ್ ಸನ ಸಂವಿಧಾನದ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು. ಆರನೇ ತರಗತಿ ವೈಷ್ಣವಿ ಜಿ .ಕೆ. ಸಂವಿಧಾನದ ಪೂರ್ವ ಪೀಠಿಕೆಯನ್ನು ಓದಿದರು, ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪುನರುಚ್ಚರಿಸಿದರು. ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮಾ ಸಂವಿಧಾನದ ಮಹತ್ವದ ಬಗ್ಗೆ ಮಾತನಾಡಿದರು .ಶಾಲಾ ಶಿಕ್ಷಕ ಪುರುಷೋತ್ತಮ ಶ್ರೀಮತಿ ರೀಟಲತಾ ಮತ್ತು ಶ್ರೀಮತಿ ಶೋಭ ಕಾರ್ಯಕ್ರಮವನ್ನು ಸಂಯೋಜಿಸಿದರು. ಶಾಲೆಯ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.