ಸುಳ್ಯ ಶ್ರೀ ಶಾರದಾ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

0

ಸುಳ್ಯ. ಶ್ರೀ ಶಾರದ ಹೆಣ್ಮಕ್ಕಳ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವು ಅತ್ಯಂತ ವಿಜ್ರಂಭಣೆಯಿಂದ ನಡೆಯಿತು. ಕರ್ನಾಟಕ ಸರಕಾರದ ಬಂದರು ಮತ್ತು ಮೀನುಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ದ .ಕ ಗೌಡ ವಿದ್ಯಾ ಸಂಘದ ನಿರ್ದೇಶಕರಾದ ತೀರ್ಥರಾಮ ಎ ವಿ ರವರು ಕ್ರೀಡಾ ಜ್ಯೋತಿಯನ್ನು ಬೆಳಗುವುದರ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.


ಸುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸೀತಾ ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ದ .ಕ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು .ದೈಹಿಕ ಶಿಕ್ಷಣ ಉಪನ್ಯಾಸಕರಾದ ಬಾಲಚಂದ್ರ ರವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು .ಪ್ರೌಢಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಪ್ರಭಾವತಿ ಎಸ್ .ರವರು ಸಹಕರಿಸಿದರು. ಎನ್ ಸಿ ಸಿ ಮತ್ತು ವಿದ್ಯಾರ್ಥಿನಿಯರ ಪಥ ಸಂಚಲನ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತ್ತು. ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ .ಕೆ ಸ್ವಾಗತಿಸಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಭಾರತಿ .ಪಿ ರವರು ವಂದಿಸಿದರು. ಉಪನ್ಯಾಸಕಿ ಸ್ವರ್ಣ ಕಲಾ ಎ .ಎಸ್ ರವರು ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿನಿಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಿ ಚಿನ್ನ .ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ನೀಡಿ ಗೌರವಿಸಲಾಯಿತು.