ಅಡ್ಕಾರು ಅಯ್ಯಪ್ಪ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ವತಿಯಿಂದ ಡಿ.15ರಂದು ಜರುಗಲಿರುವ ಅಯ್ಯಪ್ಪ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ನ.27ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷ ನಾರಾಯಣ ಮಡಿವಾಳ ಅಡ್ಕಾರು, ಅಧ್ಯಕ್ಷ ಅಶೋಕ ಅಡ್ಕಾರು, ಪ್ರ.ಕಾರ್ಯದರ್ಶಿ ಮನು ಪದವು, ಉತ್ಸವ ಸಮಿತಿ ಅಧ್ಯಕ್ಷ ಉದಯ ಮಣಿಯಾಣಿ ಪದವು, ಕೋಶಾಧಿಕಾರಿ ದಾಮೋದರ ಎ.ಎಸ್. ಪದವು, ಗುರುಸ್ವಾಮಿ ಚಂದ್ರಶೇಖರ (ಪುಟ್ಟು) ಸೇರಿದಂತೆ ಅಯ್ಯಪ್ಪ ವೃತಧಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.