ಕೆವಿಜಿ ಐಪಿಎಸ್ ನಲ್ಲಿ ಸಂವಿಧಾನ ದಿನಾಚರಣೆ

0

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ನ.26 ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹತ್ತನೇ ತರಗತಿಯ ಅಭಿಜ್ಞಾ ಭಟ್ ಮತ್ತು ಎಂಟನೇ ತರಗತಿಯ ನಿಸರ್ಗ ಭಾರತದ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ತಿಳಿಸಿದರು.

ಎಂಟನೇ ತರಗತಿಯ ಧನ್ವಿ ನಾನು ಭಾರತದ ನಾಗರೀಕನಾಗಿ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿದು ಭಾರತದ ಸಂವಿಧಾನಕ್ಕೆ ನಂಬಿಕೆ ಮತ್ತು ನಿಷ್ಠೆಯನ್ನು ತೋರುತ್ತಾ, ನನ್ನ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ’ ಎಂಬ ಪ್ರತಿಜ್ಞಾವಿಧಿಯನ್ನು ಬೋಧಿಸಿದಳು. ಹತ್ತನೇ ತರಗತಿಯ ಪ್ರತಿಜ್ಞಾ ಕಾರ್ಯಕ್ರಮವ ನಿರೂಪಿಸಿದಳು. ವಿದ್ಯಾರ್ಥಿಗಳಲ್ಲಿ ಭಾರತದ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಅರಿತುಕೊಳ್ಳಲು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅತಿ ಮುಖ್ಯ ಎಂಬುದಾಗಿ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ. ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ತಿಳಿಸಿದರು.


ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.