ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

0

ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಮಹಿಳಾ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ನವೆಂಬರ್ 26ರಂದು ಆಚರಿಸಲಾಯಿತು. ಸಂವಿಧಾನದ ರಚನೆ, ಸ್ವರೂಪ ಮತ್ತು ಮೂಲಭೂತ ಹಕ್ಕುಗಳು, ಕರ್ತವ್ಯಗಳು ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುವಳಿಕೆಯನ್ನು ನೀಡುವುದರ ಜೊತೆಗೆ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಲಾಯಿತು. ಕಾರ್ಯಕ್ರಮವನ್ನು ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ ಎನ್ ರವರು ನಡೆಸಿಕೊಟ್ಟರು .ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ .ಕೆ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.