ಅರಣ್ಯ ಇಲಾಖೆಯ ರಾಜ್ಯ ಮಟ್ಟದ ಕ್ರೀಡಾಕೂಟ, ಸುಳ್ಯ ಎಸಿಎಫ್ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ 4 ಚಿನ್ನದೊಂದಿಗೆ ವೈಯಕ್ತಿಕ ಚಾಂಪಿಯನ್

0

ಬೆಳಗಾಂ ನಲ್ಲಿ ನಡೆದ ಅರಣ್ಯ ಇಲಾಖೆ ಸಿಬ್ಬಂದಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿರುವ ಸುಳ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿಯವರು ನಾಲ್ಕು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಗೆ ಭಾಜನರಾಗಿದ್ದಾರೆ.

ಹಿರಿಯರ ವಿಭಾಗದ ಶಾಟ್ ಪುಟ್, ಡಿಸ್ಕಸ್ ತ್ರೋ, ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದು ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.