ಪಂಜ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಗ್ರಾಮ ಸಭೆ

0

ಪಂಜ ಗ್ರಾಮ ಪಂಚಾಯತ್ ದಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಆಭಾ ನೋಂದಣಿಶಿಬಿರ
ನ.25 ರಂದು ನಡೆಯಿತು. ಸಭಾದ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ವಹಿಸಿದ್ದರು.

ನೋಡೆಲ್ ಅಧಿಕಾರಿಯಾಗಿ ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಇವರು ಭಾಗವಹಿಸಿದ್ದರು. ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು, ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸರ್ವ ಸದಸ್ಯರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಪಂಜ ಮಹಿಳಾ ಮಂಡಲದ ಅಧ್ಯಕ್ಷರು, ವೇದಿಕೆಯಲ್ಲಿ ಉಪಸ್ಥಿತರಿದ್ದರು.