ಕರ್ನಾಟಕ ಜಾನಪದ ವಿ.ವಿ.ಯಿಂದ
ಜೀವನ್ ರಾಂ ಸುಳ್ಯರಿಗೆ ಗೌರವ ಡಾಕ್ಟರೇಟ್

0

ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ನೀಡುವ 2022 ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಗೆ ಪ್ರಸಿದ್ಧ ರಂಗಕರ್ಮಿ ಜೀವನ್ ರಾಂ ಸುಳ್ಯ ಆಯ್ಕೆ ಆಗಿರುತ್ತಾರೆ.
ಜೀವನ್ ರಾಂ ರವರು ರಂಗಭೂಮಿ, ಜಾನಪದ, ಯಕ್ಷಗಾನ, ಸಂಗೀತ, ಕಲೆ, ಜಾದೂ, ಚಲನಚಿತ್ರ ಹಾಗೂ ಸಂಘಟನೆ ಮುಂತಾಗಿ ಸಾಂಸ್ಕೃತಿಕ ಲೋಕದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಜಾನಪದ ವಿಶ್ವವಿದ್ಯಾಲಯು ಇವರನ್ನು ಈ ಗೌರವಕ್ಕೆ ಆಯ್ಕೆ ಮಾಡಿರುತ್ತದೆ.
ಡಿಸೆಂಬರ್ 1 ರಂದು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕರ್ನಾಟಕ ಜಾನಪದ ವಿ.ವಿ.ಯ ಆರನೇ ಘಟಿಕೋತ್ಸವದ ಸಂದರ್ಭದಲ್ಲಿ ಜೀವನ್ ರಾಂ ಅವರಿಗೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ ನಾರಾಯಣ್ ಸಿ.ಎನ್. ಇವರು ಉಪಸ್ಥಿತರಿರುತ್ತಾರೆಂದು ಜಾನಪದ ವಿ.ವಿ.ಯ ಕುಲಪತಿಗಳಾದ ಪ್ರೊ.ಟಿ.ಎಂ.ಭಾಸ್ಕರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here