ಉಬರಡ್ಕ: ಅಡಿಕೆ ಎಲೆ ಚುಕ್ಕೆ ರೋಗ ಮಾಹಿತಿ ಕಾರ್ಯಗಾರ

0

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಉಬರಡ್ಕ ಮಿತ್ತೂರು ಇದರ ವತಿಯಿಂದ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಅಡಿಕೆ ಎಲೆ ಚುಕ್ಕೆ ರೋಗ ಹಾಗೂ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಗಾರ ನ.28 ರಂದು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನ ದಲ್ಲಿ ನಡೆಯಿತು.


ಕಾರ್ಯಕ್ರಮದ ಸಭಾಧ್ಯಕ್ಷತೆ ಯನ್ನು ಸಂಘದ ಅಧ್ಯಕ್ಷರಾದ ದಾಮೋದರ ಗೌಡ ಮದುವೆಗದ್ದೆ ಯವರು ವಹಿಸಿ ಪ್ರಾಸ್ತಾವಿಕವಾಗಿ ಮಾತಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಕೇದಾರನಾಥ ವಿಜ್ಞಾನಿಗಳು ಕೆವಿಕೆ ಮಂಗಳೂರು ರವರು ಭಾಗವಹಿಸಿ ಅಡಿಕೆಗೆ ಬರುವ ಎಲ್ಲಾ ರೋಗ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರತ್ನಾಕರ ಗೌಡ ಬಳ್ಳಡ್ಕ, ಸುಳ್ಯತಾಲೂಕು ಕೃಷಿ ಇಲಾಖೆಯ ತಾಂತ್ರಿಕ ವ್ಯವಸ್ಥಾಪಕರಾದ ನಂದಿತಾ ರವರು ಉಪಸ್ಥಿತರಿದ್ದರು
ಸಂಘದ ಮುಖ್ಯಕಾರ್ಯನಿರ್ವಾಹಣಾ ಧಿಕಾರಿ ಜಯಪ್ರಕಾಶ್ ಉರುಂಡೆ ಸ್ವಾಗತಿಸಿ, ಕಾರ್ಯಕ್ರಮವನ್ನು ಸಂಘದ ನಿರ್ದೇಶಕ ವಿಜಯಕುಮಾರ್ ಉಬರಡ್ಕ ನಿರೂಪಿಸಿದರು. ಹರೀಶ್ ಆಚಾರ್ಯ ಪ್ರಾರ್ಥಿಸಿದರು. ನಿರ್ದೇಶಕ ಹರಿಪ್ರಸಾದ್ ಪಾನತ್ತಿಲ ವಂದಿಸಿದರು.
ಸಿಬ್ಬಂದಿಗಳಾದ ಶಿವಪ್ರಸಾದ್, ಗುರುವ, ರಮ್ಯರವರು ಸಹಕರಿಸಿದರು. ಸಂಘದ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.