ಕುಕ್ಕೆ ದೇವಳದಲ್ಲಿ ಅನ್ನದಾನದ ಸಂಕೇತವಾಗಿ ಪಲ್ಲಪೂಜೆ

0

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಕಾರ್ತಿಕ ಶುದ್ಧ ಪಂಚಮಿಯ ನ.28 ರಂದು ಶ್ರೀ ದೇವಳದಲ್ಲಿ ಪಲ್ಲಪೂಜೆ ನೆರವೇರಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಒಳಾಂಗಣದಲ್ಲಿ ಪಲ್ಲಪೂಜೆ ನೆರವೇರಿಸಿದರು.ಅಲ್ಲದೆ ಅಕ್ಷಯ ಪಾತ್ರೆಗೆ ಪೂಜೆ ನೆರವೇರಿಸಿದರು. ಪುರೋಹಿತ ಪ್ರಸನ್ನ ಹೊಳ್ಳ ಆದಿಸುಬ್ರಹ್ಮಣ್ಯ ಬೋಜನ ಶಾಲೆಯಲ್ಲಿ ಅನ್ನಬ್ರಹ್ಮನಿಗೆ ಪೂಜೆ ಸಲ್ಲಿಸಿದರು.ಬಳಿಕ ಪ್ರಸಾದ ವಿತರಿಸಿದರು. ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರ ನಿರಂತರ ಅನ್ನದಾನ ನೀಡುವ ಕ್ಷೇತ್ರವಾದುದರಿಂದ ಪಂಚಮಿಯ ದಿನ ಅನ್ನಪ್ರಸಾದಕ್ಕೆ ಪೂಜೆ ನೆರವೇರುತ್ತದೆ.
ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ವನಜಾ.ವಿ.ಭಟ್, ಮನೋಹರ ರೈ, ಎಸ್ ಎಸ್‌ಪಿಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಚಂದ್ರಶೇಖರ್ ಮರ್ದಾಳ, ಮನೋಜ್ ಸುಬ್ರಹ್ಮಣ್ಯ, ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶ್ರೀ ದೇವಳದ ದೇವಣ್ಣ ಗೌಡ, ಮಹಾಬಲೇಶ್ವರ ದೋಳ, ಬಾಲಸುಬ್ರಹ್ಮಣ್ಯ ಮಾರರ್, ಲೋಕೇಶ್ ಎ.ಆರ್, ರವೀಂದ್ರ ಎನ್.ಎಸ್, ನಿರಂಜನ ಭಟ್, ಸೇರಿದಂತೆ ದೇವಳದ ಸಿಬ್ಬಂಧಿಗಳು, ಭಕ್ತರು ಉಪಸ್ಥಿತರಿದ್ದರು.