ಕೊಡಗು ಸಂಪಾಜೆ ಚೆಡಾವು ಶ್ರೀ ಲಕ್ಷ್ಮಿ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

0

ಕೊಡಗು ಸಂಪಾಜೆ ಗ್ರಾಮದ ಚೆಡಾವು ಶ್ರೀ ಲಕ್ಷ್ಮಿ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಿನಾಂಕ ನ.28 ರಂದು ಪಂಚಮಿ ಮತ್ತು ನ.29 ರಂದು ಷಷ್ಠಿ ಪೂಜಾ ಕಾರ್ಯಕ್ರಮ ನಡೆಯಿತು. ಎಂದಿನಂತೆ ಪೂಜಾ ಕಾರ್ಯಕ್ರಮ, ಪ್ರಸಾದ ವಿತರಣೆ ನಡೆಯಿತು.
ನ.28 ರಂದು ರಾತ್ರಿ ಗಂಟೆ 7 ರಿಂದ ಶ್ರೀ ಪಂಚಾನನ ಭಜನಾ ತಂಡ ಹಾಗೂ ಸ್ಥಳೀಯ ಭಕ್ತಾಭಿಮಾನಿಗಳಿಂದ ಭಜನೆ ಕಾರ್ಯಕ್ರಮ ಮತ್ತು ಕಾಂತಾರ ಚಲನಚಿತ್ರ ಪ್ರದರ್ಶಿಸಲಾಯಿತು.
ನ.29 ರಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ಮಹಾಗಣಪತಿ ಭಜನಾ ತಂಡ ಅಡೂರು ಇವರಿಂದ ಭಜನಾ ಕಾರ್ಯಕ್ರಮ ನಡೆದು ನಂತರ ಮಹಾಪೂಜೆ, ಪ್ರಸಾದ ವಿತರಣೆಯ ನಂತರ ಅನ್ನಸಂತರ್ಪಣೆ ನಡೆಯಿತು. ಊರ ಪರವರ ಸಮಸ್ತ ಭಕ್ತಾಧಿಗಳು ಆಗಮಿಸಿ ಶ್ರೀ ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.