ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜಾಗತಿಕ ಏಡ್ಸ್ ದಿನದ ಆಚರಣೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ದ.1 ರಂದು ಜಾಗತಿಕ ಏಡ್ಸ್ ದಿನವನ್ನು ಆಚರಿಸಲಾಯಿತು. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಸಂಸ್ಥೆಯ P.H .C.O ಆಗಿರುವ ಶ್ರೀಮತಿ ಹೇಮಲತಾ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿಯನ್ನು ನೀಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಆಧಿಕಾರಿಗಳು ಆಗಿರುವ ಶ್ರೀಮತಿ ಆರತಿ ಕೆ. ಸ್ವಾಗತಿಸಿದರು. ಯೂತ್ ರೆಡ್ ಕ್ರಾಸ್ ಘಟಕದ ಅಧಿಕಾರಿಗಳು ಶ್ರೀ ಸೃಜನ್ ಮುಂಡೋಡಿ ಇವರು ಧನ್ಯವಾದ ಸಮರ್ಪಿಸಿದರು. ಯೂತ್ ರೆಡ್ ಕ್ರಾಸ್ ಘಟಕದ ಅಧಿಕಾರಿಯಾಗಿರುವ ಶ್ರೀಮತಿ ವನಿತಾ ಉಪಸ್ಥಿತರಿದ್ದರು.