ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಪುನಶ್ಚೇತನ ಕಾರ್ಯಕ್ರಮ, ಸಮಾಜದ ಸ್ವಾಸ್ಧ್ಯ ಕಾಪಾಡಲು ಕಾನೂನಿನ ಅರಿವು ಮುಖ್ಯ – ಪ್ರೋ. ರುದ್ರಕುಮಾರ್.

0
38

ದ. 01 ರಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ 3 ವರ್ಷದ ಮತ್ತು 5 ವರ್ಷದ ಹೊಸ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ. ಬಿ ಅಧ್ಯಕ್ಷತೆ ವಹಿಸಿದ್ದರು. ಪ್ರೋ. ರುದ್ರಕುಮಾರ್ ಪ್ರಾಂಶುಪಾಲರು ಎನ್.ಎಮ್.ಸಿ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಸಮಾಜದ ಸ್ವಾಸ್ಧ್ಯ ಕಾಪಾಡಲು ಕಾನೂನಿನ ಅರಿವು ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.

p>

ಮುಖ್ಯ ಅತಿಥಿ ಶಿವಪ್ರಸಾದ್ ಕೆಂಬಾರೆಯವರು ಕಾನೂನು ವಿದ್ಯಾಭ್ಯಾಸದ ಮಹತ್ವ ಮತ್ತು ವೃತ್ತಿಯ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿನಿಯರಾದ ಅನನ್ಯ ಮತ್ತು ಲಾವಣ್ಯ ಪ್ರಾರ್ಥಿಸಿ, ಉಪನ್ಯಾಸಕರಾದ ರಂಜನ್ ಕೆ.ಎನ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಟೀನಾ ಎಚ್.ಎಸ್ ಸ್ವಾಗತಿಸಿ, ಉಪನ್ಯಾಸಕ ರಾಜೇಂದ್ರ ಪ್ರಸಾದ್. ಎ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋದಕ, ಬೋದಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here