ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ನೂತನ ಶೌಚಾಲಯ ಕಟ್ಟಡ ಉದ್ಘಾಟನೆ, ಸಾಧಕರಿಗೆ ಸನ್ಮಾನ, ಅಮರ ಸುಳ್ಯದ ಸಮರ ನಾಯಕ ಕೆದಂಬಾಡಿ ರಾಮಯ್ಯ ಗೌಡ ನಾಟಕ ಪ್ರದರ್ಶನ

0
40

p>

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಮತ್ತು ಅಮರತರಂಗ ಸುಳ್ಯ ಇದರ ಸಹಯೋಗದೊಂದಿಗೆ ಜಿಂದಾಲ್ ಅಲ್ಯುಮಿನಿಯಂ ಕಂಪನಿಯ ಉದಾರ ಕೊಡುಗೆಯಾದ ನೂತನ ಶೌಚಾಲಯ ಕಟ್ಟಡ ಉದ್ಘಾಟನೆ, ಸಾಧಕರಿಗೆ ಸನ್ಮಾನ, ಅಮರ ಸುಳ್ಯದ ಸಮರ ನಾಯಕ ಕೆದಂಬಾಡಿ ರಾಮಯ್ಯ ಗೌಡ ನಾಟಕ ಪ್ರದರ್ಶನವು ನ. ೩೦ರಂದು ಕುಕ್ಕುಜಡ್ಕ ಸುವರ್ಣ ರಂಗ ಚೊಕ್ಕಾಡಿ ವಿದ್ಯಾ ಸಂಸ್ಥೆಯ ಸಭಾಭವನದಲ್ಲಿ ನಡೆಯಿತು. ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯ ಮೇಲ್ತೋಟ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ಅಮರ ತರಂಗದ ಅಧ್ಯಕ್ಷ ಕೆ. ಆರ್. ತೇಜಕುಮಾರ್ ಕುಡೆಕಲ್ಲು, ಜಿಂದಾಲ್ ಅಲ್ಯೂಮಿನಿಯಂ ಕಂಪೆನಿಯ ಹಿರಿಯ ವ್ಯವಸ್ಥಾಪಕ ನಾಗೇಂದ್ರ ಭಟ್, ಸಾಹಿತಿ ಹಾಗೂ ಸಂಶೋಧಕ ಎ.ಕೆ. ಹಿಮಕರ, ಆಹಾರ ಸರಬರಾಜು ಇಲಾಖೆಯ ಪಡಿತರ ವ್ಯವಸ್ಥೆಯ ಜನ ಜಾಗೃತಿ ಸಮಿತಿಯ ಜಿಲ್ಲಾ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಕುಕ್ಕುಜಡ್ಕ ಸೊಸೈಟಿ ಅಧ್ಯಕ್ಷ ಕೇಶವ ಕರ್ಮಜೆ, ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಮುಖ್ಯೋಪಾಧ್ಯಾಯ ಸಂಕೀರ್ಣ ಚೊಕ್ಕಾಡಿ ಉಪಸ್ಥಿತರಿದ್ದರು.
ರಾಧಾಕೃಷ್ಣ ಬೊಳ್ಳೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ತೇಜಸ್ವಿ ಕಡಪಳ ಸ್ವಾಗತಿಸಿ, ಸಂಕೀರ್ಣ ಚೊಕ್ಕಾಡಿ ವಂದಿಸಿದರು.

LEAVE A REPLY

Please enter your comment!
Please enter your name here