ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಭವಿಷ್ಯದ ಮೊಗ್ಗುಗಳು ಕಾಯಕ್ರಮದ ಉದ್ಘಾಟನೆ – ಮಾಹಿತಿ ಕಾರ್ಯಾಗಾರ

0


ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಭವಿಷ್ಯದ ಮೊಗ್ಗುಗಳು ಎಂಬ ಸರಣಿ ಕಾರ್ಯಕ್ರಮ ಉದ್ಘಾಟನೆ ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ಭವಿಷ್ಯದ ವಿದ್ಯಾಭ್ಯಾಸ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ ನ. 30ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಬಾಲಚಂದ್ರ ಗೌಡ ಕಾರ್ಯಕ್ರಮ ಉದ್ಘಾಟಿಸಿದರು.


ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ 2015ನೇ ಬ್ಯಾಚ್ ನಲ್ಲಿ ಕರ್ನಾಟಕ ಅರಣ್ಯ ಇಲಾಖೆ ಪರೀಕ್ಷೆಯಲ್ಲಿ ಮೊದಲನೇ ರ್ಯಾಂಕ್ ಪಡೆದು ಆಯ್ಕೆಯಾಗಿದ್ದ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ಮಾತನಾಡುತ್ತ ಜೀವ ವಿಜ್ಞಾನ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯಲ್ಲಿ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಇರುವ ವಿಪುಲ ಅವಕಾಶಗಳು ಹಾಗೂ ವಿದ್ಯಾರ್ಜನೆಯಿಂದ ಉದ್ಯೋಗಕ್ಕೆ ತೆರಳುವ ಮಾರ್ಗೋಪಾಯಗಳ ಬಗ್ಗೆ ವಿವರಿಸಿದರು.

ಎನ್ನೆಂಸಿ ನೇಚರ್ ಕ್ಲಬ್ ನ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಇನ್ನಷ್ಟು ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ನೇಚರ್ ಕ್ಲಬ್‌ನ ಕಾರ್ಯದರ್ಶಿ ಕು. ಶ್ರೇಯ, ಕೋಶಾಧಿಕಾರಿ ಮೊಹಮ್ಮದ್ ಹಾಶಿಮ್ ಉಪಸ್ಥಿತರಿದ್ದರು. ಕ್ಲಬ್ ಸದಸ್ಯರಾದ ಕು. ಶ್ರೇಯ, ಕು. ವೀಕ್ಷಿತಾ ಮತ್ತು ಶಶಾಂಕ್ ಪ್ರಾರ್ಥಿಸಿ, ಕು. ಚಂಪಾ ಸ್ವಾಗತಿಸಿದರು. ನೇಚರ್ ಕ್ಲಬ್ ಸಂಯೋಜಕರಾದ ಕುಲದೀಪ್ ಪೆಲ್ತಡ್ಕ ಪ್ರಾಸ್ತಾವಿಕ ಮಾತನಾಡಿ, ಕು. ಅರ್ಚನಾ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಕು. ಮನ್ವಿತ ವಂದಿಸಿ, ಕು. ಸುಪ್ರೀತಾ ಮತ್ತು ಕು. ಕವನ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಉಪನ್ಯಾಸಕರಾದ ಅಕ್ಷತಾ, ಕೃತಿಕಾ, ವಿನುತ, ಪ್ರಣೀತಾ, ಹರ್ಷಕಿರಣ ಮತ್ತು ಅಜಿತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಜಯಂತಿ, ಭವ್ಯ ಮತ್ತು ಶಿವಾನಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಸಹಕರಿಸಿದರು.