ಸುಳ್ಯ: ಎನ್.ಎಂ.ಸಿ. ವಿಶ್ವ ಏಡ್ಸ್ ಜಾಗೃತಿ ದಿನಾಚರಣೆ

0

ಸುಳ್ಯದ ನೆಹರು ಮೆಮೊರಿಯಲ್ ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಕಾತರಿಕೋಶ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ಹಾಗೂ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಕೃಪಾ ಎ.ಯನ್, ಆಂತರಿಕ ಗುಣಮಟ್ಟ ಖಾತರಿ ಕೋಶಾದ ಸಂಯೋಜಕಿ ಮಮತಾ ಕೆ ಮತ್ತು ಕಾಲೇಜಿನ ಅಧ್ಯಾಪಕ ಅಧ್ಯಾಪಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಹಚ್.ಐ. ವಿ ಏಡ್ಸ್ ಕುರಿತಾದ ಮಾಹಿತಿಯನ್ನು ಒಳಗೊಂಡ ಬಿತ್ತಿಪತ್ರ ವನ್ನು ಪ್ರತಿ ತರಗತಿಗಳಲ್ಲಿ ಕುಮಾರಿ ಚೈತನ್ಯ ತೃತೀಯ ಬಿ.ಎ ಹಾಗೂ ಪ್ರಥಮ ಬಿ.ಎಸ್.ಡಬ್ಲ್ಯೂ ದಕ್ಷಯಿ ಡಿ.ಯಸ್ ರವರು ಓದುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಸಮಾಜ ಕಾರ್ಯ ಸಂಘದ ಸಂಯೋಜಕಿ ಶೋಭಾ ಎ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.