ಕೃಷಿ ಜಾಗದಲ್ಲಿ 110 ಕೆ ವಿ ವಿದ್ಯುತ್ ಲೈನ್ ನಿಂದ ಉಂಟಾಗುವ ನಷ್ಟಕ್ಕೆ ಹೆಚ್ಚುವರಿ ಪರಿಹಾರ ನೀಡಲು ಕೋರಿದ ಒತ್ತಾಯಕ್ಕೆ ಅಧಿಕಾರಿಗಳಿಂದ ಭರವಸೆ : ಡಿ ಎಂ ಶಾರಿಕ್

0

ಸುಳ್ಯದ ವಿದ್ಯುತ್ ಸಮಸ್ಯೆಯ ಬಗ್ಗೆ 110 ಕೆವಿ ವಿದ್ಯುತ್ ಸ್ಥಾವರ ನಿರ್ಮಾಣದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಡಿಎಂ ಶಾರಿಕ್ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವನ್ನು ಬರೆದಿದ್ದರು.
ಪ್ರಧಾನಮಂತ್ರಿ ಕಚೇರಿಯಿಂದ ಈ ವಿಷಯಕ್ಕೆ ಸಂಬಂಧಿಸಿ ಬೆಂಗಳೂರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಮಾಹಿತಿ ಕೇಳಿದ್ದು, ಸದ್ರಿ ಅರ್ಜಿಯನ್ನು ವ್ಯವಸ್ಥಾಪಕ ನಿರ್ದೇಶಕ ಕರ್ನಾಟಕ ವಿದ್ಯುತ್ ನಿಗಮಕ್ಕೆ ವರ್ಗಾಯಿಸಲಾಗಿರುತ್ತದೆ ಎಂಬ ಮಾಹಿತಿ ನೀಡಲಾಗಿದೆ ಎಂದು ಶಾರಿಕ್ ತಿಳಿಸಿದ್ದಾರೆ.
ಪತ್ರಿಕೆಗೆ ಮಾಹಿತಿ ನೀಡಿರುವ ಅವರು ಇಂಡಿಯನ್ ಟೆಲಿಗ್ರಾಫಿಕ್ ಆಕ್ಟ್ ಪ್ರಕಾರ ವಿದ್ಯುತ್ ತಂತಿ ಹಾದುಹೋಗುವ ಜಮೀನಿಗೆ ಪರಿಹಾರ ನೀಡಲಾಗುವುದಿಲ್ಲ ಬದಲಾಗಿ ಗಿಡ,ಮರ ಮತ್ತು ಕೃಷಿಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು ಆದರೂ ಕೃಷಿಕರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಪರಿಹಾರದ ಮೊತ್ತವನ್ನು ಹೆಚ್ಚುವರಿಯಾಗಿ ನೀಡುವುದಾಗಿ ಅಧಿಕಾರಿಗಳು ಭರವಸೆಯನ್ನು ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.