ಸರ್ವಧರ್ಮ ಸಮನ್ವಯತೆಯ ಸಂಪಾಜೆಯಲ್ಲಿ ಕನ್ನಡದ ತೇರು
ಕೆ.ಆರ್.ಗಂಗಾಧರ್ ಅಧ್ಯಕ್ಷತೆಯಲ್ಲಿ 26ನೇ ಸುಳ್ಯ ತಾl ಕನ್ನಡ ಸಾಹಿತ್ಯ ಸಮ್ಮೇಳನ

0


ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ ತಾಲೂಕು ಸಾಹಿತ್ಯ ಸಮ್ಮೇಳನ ಇದರ ಆಶ್ರಯದಲ್ಲಿ ದ.10ರಂದು ಗೂನಡ್ಕ ದ ಸಜ್ಜನ ಸಭಾಂಗಣದಲ್ಲಿ ನಡೆಯಲಿದೆ ಎಂದು ಸುಳ್ಯ ತಾ.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಹೇಳಿದರು.

ಅವರು ಇಂದು ನೂತನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪ್ರಥಮ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ವಿವರ ನೀಡಿದರು.
ಬೆಳಿಗ್ಗೆ 8:45ಕ್ಕೆ ಕನ್ನಡ ಭುವನೇಶ್ವರಿ ಮೆರವಣಿಗೆಯೊಂದಿಗೆ ಸಾಹಿತ್ಯ ಸಮ್ಮೇಳನ ಆರಂಭಗೊಳ್ಳಲಿದೆ‌. ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ. ಹಮೀದ್ ರಾಷ್ಟ್ರಧ್ವಜಾರೋಹಣ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ ಪಿ ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣ, ಕಸಾಪ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಕನ್ನಡ ಧ್ವಜಾರೋಹಣ ಮಾಡಲಿದ್ದಾರೆ. ವಸ್ತು ಪ್ರದರ್ಶನ ಉದ್ಘಾಟನೆಯನ್ನು ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಪುಸ್ತಕ ಪ್ರದರ್ಶನವನ್ನು ತಹಶೀಲ್ದಾರ್ ಕು. ಅನಿತಾ ಲಕ್ಷ್ಮಿ ನೆರವೇರಿಸಲಿದ್ದಾರೆ. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿ ಕೆ. ಆರ್. ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಮ್ಮೇಳನದ ಉದ್ಘಾಟನೆಯನ್ನು ಹಿರಿಯ ವಿಮರ್ಶಕರಾದ ಎಸ್. ಆರ್ .ವಿಜಯಶಂಕರ್ ನೆರವೇರಿಸಲಿದ್ದಾರೆ. ಸ್ಮರಣ ಸಂಚಿಕೆ ಬಿಡುಗಡೆಯನ್ನು ಸಚಿವರಾದ ಎಸ್ ಅಂಗಾರ, ಹೊಸ ಕೃತಿಗಳ ಬಿಡುಗಡೆಯನ್ನು ಮಡಿಕೇರಿ ಆಕಾಶವಾಣಿಯ ಸುಬ್ರಾಯ ಸಂಪಾಜೆ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ ರಾಮ್ ಸುಳ್ಳಿ ಭಾಗವಹಿಸಲಿದ್ದಾರೆ. ವೇದಿಕೆಯಲ್ಲಿ ಸಮ್ಮೇಳನದ ನಿಕಟ ಪೂರ್ವಾಧ್ಯಕ್ಷರಾದ ಡಾ.ಪೂವಪ್ಪ ಕಣಿಯೂರು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್, ಸುಳ್ಯ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಉಪಸ್ಥಿತರಿರುತ್ತಾರೆ. ಡಾ.ಲೀಲಾಧರ್ ಡಿ.ವಿ. ಸಮ್ಮೇಳನ ಅಧ್ಯಕ್ಷರ ಪರಿಚಯ ಮಾಡಲಿದ್ದಾರೆ. ಪ್ರೊ. ಸಂಜೀವ ಕುದ್ಪಾಜೆ ಸ್ಮರಣ ಸಂಚಿಕೆಯ ಬಗ್ಗೆ ಮಾತನಾಡಲಿದ್ದಾರೆ .ಈ ಸಂದರ್ಭದಲ್ಲಿ ನೂತನ ಕೃತಿಗಳು ಬಿಡುಗಡೆಯಾಗಲಿದೆ. ಬಳಿಕ ಸಾಹಿತಿ ಶ್ರೀಮತಿ ಲೀಲಾ ದಾಮೋದರ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ ಕವಿಗಳಾದ ಚಂದ್ರವತಿ ಬಡ್ಡಡ್ಕ, ತಾರಾನಾಥ ಅಡಿಗೈ, ದಮಯಂತಿ ಪೆರಾಜೆ,ಆಶಾ ಬಿ.ಆರ್., ಕುಸುಮಾಕರ ಅಂಬೆಕಲ್ಲು, ಅಪೂರ್ವ ಕೆ‌.ಟಿ .,ವಿನೋದ್ ಮೂಡಗದ್ದೆ, ವಿದ್ಯಾಶಂಕರಿ ಎಸ್. ಭಾಗವಹಿಸಲಿದ್ದಾರೆ .ಮಧ್ಯಾಹ್ನ ತಾಲೂಕಿನ ಗಾಯಕರಿಂದ ಕನ್ನಡ ಗೀತ ಗಾಯನ ಮತ್ತು ಬಹುಮಾನ ವಿತರಣೆ ನಡೆಯಲಿದೆ. ಅಪರಾಹ್ನ 2.30ರಿಂದ ಅಗಲಿದ ಸಾಹಿತಿಗಳಾದ ಟಿ.ಜಿ.ಮುಡೂರು, ಕೋಡಿ ಕುಶಾಲಪ್ಪಗೌಡ, ಎನ್. ಎಸ್.ದೇವಿಪ್ರಸಾದ್ ಸಂಪಾಜೆ, ಅವರಿಗೆ ನುಡಿ ನಮನ ಕಾರ್ಯಕ್ರಮ ನಡೆಯಲಿದೆ.ಜನಪದ ಸಂಶೋಧಕರಾದ ಡಾ. ಸುಂದರ ಕೇನಾಜೆ ನುಡಿನಮನ ಸಲ್ಲಿಸಲಿದ್ದಾರೆ. ಬಳಿಕ ನಾಡು ನುಡಿ ವರ್ತಮಾನದ ಸವಾಲುಗಳು ವಿಚಾರಗೋಷ್ಠಿ ನಡೆಯಲಿದೆ. ಅಡಿಕೆ ಪತ್ರಿಕೆಯ ಸಂಪಾದಕರಾದ ಶ್ರೀ ಪಡ್ರೆ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಮತಿ ಸಂಗೀತರವಿರಾಜ್ ಮತ್ತು ಗೋಪಾಲ ಪೆರಾಜೆ ವಿಚಾರ ಮಂಡನೆ ಮಾಡಲಿದ್ದಾರೆ.
ಸಂಜೆ ಡಾ. ಶ್ರೀನಾಥ ಎಂ.ಪಿ.ಅಧ್ಯಕ್ಷ ತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ‌.ರಾಮಕುಂಜದ ರಾಮಕುಂಜೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಗಣರಾಜ ಕುಂಬ್ಳೆ ಸಮಾರೋಪ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 12 ಮಂದಿ ಸಾಧಕರಿಗೆ ಕನ್ನಡ ಕಸ್ತೂರಿ ಸನ್ಮಾನ ನಡೆಯಲಿದೆ. ಎ.ಒ.ಎಲ್.ಇ.ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸಾಧಕರನ್ನು ಸನ್ಮಾನಿಸಲಿದ್ದಾರೆ. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಎನ್.ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕ.ಸಾ.ಪ.ನಿಕಟಪೂರ್ವಾಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ಗೌರವ ಉಪಸ್ಥಿತರಿರುತ್ತಾರೆ. ಸಮ್ಮೇಳನಾಧ್ಯಕ್ಷ ಕೆ.ಆರ್ ಗಂಗಾಧರ್ ಮಾತನಾಡಲಿದ್ದಾರೆ.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಳ್ಯ ರಂಗಮಯೂರಿ ಕಲಾ ಶಾಲೆ ಇವರ ತಂಡದಿಂದ ವಿಶ್ವಮಾನವ ರಂಗ ರೂಪಕ ಮತ್ತು ಕೃಷ್ಣ ರಾಜ್ ಬಳಗದವರಿಂದ ಕನ್ನಡ ಗೀತೆಗಳ ಗಾಯನ ನಡೆಯಲಿದೆ.ಎಂದು ಅವರು ಹೇಳಿದರು.
ಸಮ್ಮೇಳನಕ್ಕೆ ಸುಳ್ಯದಿಂದ ಬಸ್ ವ್ಯವಸ್ಥೆ
ಸಮ್ಮೇಳನ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಸ್ವಾಗತ ಸಮಿತಿ ಸೇರಿದಂತೆ ಎಲ್ಲಾ ಉಪಸಮಿತಿಗಳು ದುಡಿಯುತ್ತಿದ್ದಾರೆ. ಸಮ್ಮೇಳನದ ದಿನ ಆಗಮಿಸುವವರಿಗೆ ಅನುಕೂಲವಾಗುವ ದೃಷ್ಟಿಯಿಂದ ಸುಳ್ಯದಿಂದ ಗೂನಡ್ಕಕ್ಕೆ ಸರಕಾರಿ ಬಸ್ ವ್ಯವಸ್ಥೆ ಮಾಡಲಾಗಿದೆ.ಎಂದು ಸ್ವಾಗತ ಸಮಿತಿ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಹೇಳಿದರು. ಸಮ್ಮೇಳನದ ಪ್ರಯುಕ್ತ ಅದೃಷ್ಟ ಚೀಟಿ ಹಮ್ಮಿಕೊಂಡಿದ್ದು,ಪ್ರಥಮ ಬಹುಮಾನ 2 ಗ್ರಾಂ ಚಿನ್ನ, ದ್ವಿತೀಯ ಬಹುಮಾನ 4ಸಾವಿರ ಬೆಲೆಯ ರೇಷ್ಮೆ ಸೀರೆ, ತೃತೀಯ ಬಹುಮಾನ ಗೋಡೆ ಗಡಿಯಾರ ನೀಡಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕ.ಸಾ.ಪ.ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ,ಗೌರವ ಕೋಶಾಧಿಕಾರಿ ದಯಾನಂದ ಆಳ್ವ,ಸ್ವಾಗತ ಸಮಿತಿ ಕಾರ್ಯದರ್ಶಿ ದಾಮೋದರ ಗೌಡ ಕೆ.,ಕಾರ್ಯಾಧ್ಯಕ್ಷ ಜಿ.ಕೆ.ಹಮೀದ್,ಕಸಾಪ ನಿರ್ದೇಶಕರಾದ ಕೇಶವ ಸಿ.ಎ.,ಲತಾಶ್ರೀ ಸುಪ್ರೀತ್ ಮೋಂಟಡ್ಕ, ಪ್ರೊ.ಬಾಲಚಂದ್ರ ಗೌಡ, ರಮೇಶ್ ನೀರಬಿದಿರೆ, ಶರೀಫ್ ಜಟ್ಟಿಪಳ್ಳ ಉಪಸ್ಥಿತರಿದ್ದರು.