ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ. 15 ಮತ್ತು 16 ರಂದು ವರ್ಷಾವಧಿ ಜಾತ್ರೋತ್ಸವ ನಡೆಯಲಿರುವುದು. ಆ ಪ್ರಯುಕ್ತ ಡಿಸೆಂಬರ್ 2ರಂದು ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ದೇವಳದ ಪ್ರಧಾನ ಅರ್ಚಕ ಶ್ರೀಹರಿ ಕುಂಜರಾಯರವರು ವೈದಿಕ ಕಾರ್ಯಕ್ರಮ ನಡೆಸಿದ ಬಳಿಕ ದೇವಳದ ಸಮಿತಿ ಅಧ್ಯಕ್ಷ ವಸಂತ ನಡುಬೈಲು ರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು, ಸೇವಾ ಸಮಿತಿಯ ಪದಾಧಿಕಾರಿಗಳು, ಕೇರ್ಪಡಕೂಡು ಕಟ್ಟು ಸದಸ್ಯರು, ಭಕ್ತಾದಿಗಳು ಉಪಸಿತರಿದ್ದರು.