ಡಿ.25 ರಂದು ನಡೆಯುವ ತಾಲೂಕು ಯಾದವ ಸಮಾವೇಶ ಆಮಂತ್ರಣ ಪತ್ರಿಕೆ ಬಿಡುಗಡೆ

0

ಯಾದವ ಸಭಾ ತಾಲೂಕು ಸಮೇವೇಶವು ಡಿ.೨೫ ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಡಿ.02 ರಂದು ಶಿವಕೃಪಾ ಕಲಾಮಂದಿರದಲ್ಲಿ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದ ಆಮಂತ್ರಣ ಬಿಡುಗಡೆಯನ್ನು ಸುಧಾಮ ಆಲೆಟ್ಟಿ ಅಧ್ಯಕ್ಷರು ಯಾದವ ಸಭಾ ಕೇಂದ್ರ ಸಮಿತಿ ಮಂಗಳೂರು ಇವರು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಸಮಿತಿ ಪದಾಧಿಕಾರಿಗಳು, ಪ್ರಾದೇಶಿಕ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.