ಪೆರುವಾಜೆಯಲ್ಲಿ ತಾಲೂಕು ಮಟ್ಟದ ಸ್ವಚ್ಚ ಶನಿವಾರ ಜಾಥಾ

0


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸುಳ್ಯ ಹಾಗೂ ಗ್ರಾಮ ಪಂಚಾಯತ್ ಪೆರುವಾಜೆ ಇದರ ಜಂಟಿ ಆಶ್ರಯದಲ್ಲಿ ಸ್ವಚ್ಚ ಶನಿವಾರ ವನ್ನು ಡಿ. 3ರಂದು ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನೈರ್ಮಲ್ಯವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಗ್ರಾಮಗಳಲ್ಲಿ ಕಸ ಸಂಗ್ರಹಣೆ, ಮೂಲದಲ್ಲಿಯೇ ಕಸ ವಿಂಗಡನೆ, ವಿಲೇವಾರಿ, ಸ್ವಚ್ಛತಾ ಕಾರ್ಯ, ಸ್ವಚ್ಛತಾ ಶ್ರಮದಾನ, ಸ್ವಚ್ಛತೆಯ ಬಗ್ಗೆ ಅರಿವು, ಸ್ವಚ್ಛ ಗ್ರಾಮವನ್ನಾಗಿಸುವ ನಿಟ್ಟಿನಲ್ಲಿ ಪ್ರತೀ ತಿಂಗಳ ಮೊದಲ ಶನಿವಾರದಂದು ಸ್ವಚ್ಛತೆ ಕೈಗೊಳ್ಳುವ ಉದ್ದೇಶದ ಬಗ್ಗೆ ವಿವರಿಸಿ ಈ ಕಾರ್ಯ ನಿರಂತರವಾಗಿ ನಡೆಯಬೇಕು. ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸ್ವಚ್ಚತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಹಸಿ ಕಸ ಹಾಗೂ ಒಣ ತ್ಯಾಜ್ಯವನ್ನು ಬೇರ್ಪಡಿಸಿ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಎಲ್ಲರೂ ಸ್ವಚ್ಛತೆಯ ಬಗ್ಗೆ ಪಣ ತೊಡಬೇಕು ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಜಯಪ್ರಕಾಶ್ ಅಲೆಕ್ಕಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮನಾಭ ಶೆಟ್ಟಿ, ಬಾಳಿಲ ಪಂಚಾಯತ್ ಅಭಿವೃದ್ಧಿಕಾರಿಗಳಾದ ಹೂವಪ್ಪ ಗೌಡ, ಕೊಲ್ಲಮೊಗ್ರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವಿಚಂದ್ರ, ಸ.ಹಿಪ್ರಾ. ಶಾಲೆ ಪೆರುವಾಜೆ ಇಲ್ಲಿನ ಮುಖ್ಯೋಪಾಧ್ಯಾಯರಾದ ತೇಜಪ್ಪ ಗೌಡ, ಸಹ ಶಿಕ್ಷಕಿ ಶ್ರೀಮತಿ ಲೀಲಾ, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ನ ಸಿಬ್ಬಂದಿವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಸ್ವಚ್ಛತೆಯ ಸಂದೇಶ ಸಾರುವ ನಿಟ್ಟಿನಲ್ಲಿ ಜಾಥವನ್ನು ಹಮ್ಮಿಕೊಳ್ಳಲಾಯಿತು.