ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವಿವಿಧ ಸಮಿತಿಗಳ ಸಭೆ

0
178

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜ.೩೧ ರಿಂದ ಫೆ.೦೯ ರ ತನಕ ನಡೆಯುವ ಬ್ರಹ್ಮಕಲಶ ಮತ್ತು ಜಾತ್ರೋತ್ಸವದ ಪ್ರಯುಕ್ತ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ವಿವಿಧ ಸಮಿತಿಯ ಸಂಚಾಲಕರು ಮತ್ತು ಸದಸ್ಯರು, ವಾರ್ಡ್ ಸಮಿತಿಯ ಸಂಚಾಲಕರು ಹಾಗೂ ಸದಸ್ಯರು, ಊರ ಭಕ್ತಾಭಿಮಾನಿಗಳ ಸಭೆಯು ಕಾಯರ್ತೋಡಿ ಶ್ರೀ ಮಹಾವಿಷ್ಣು ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್‌ರವರು ವಹಿಸಿದರು.

p>

ವೇದಿಕೆಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಕೆ.ಉಮೇಶ್ ಮತ್ತು ಸದಸ್ಯರು, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಎ.ಟಿ.ಕುಸುಮಾಧರ, ಆರ್ಥಿಕ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಸೇವಾ ಸಮಿತಿ ಸಂಚಾಲಕ ನವೀನ್ ಕುದ್ಪಾಜೆ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಎ.ಟಿ.ಕುಸುಮಾಧರರವರು ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮದ ಅಗತ್ಯತೆಯನ್ನು ಹಾಗೂ ಆರ್ಥಿಕ ಕ್ರೋಡಿಕರಣದ ಬಗ್ಗೆ ಮಾತನಾಡಿದರು. ಆರ್ಥಿಕ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕರವರು ಆರ್ಥಿಕ ಸಂಗ್ರಹಣೆ ಬಗ್ಗೆ ಸಭೆಗೆ ವಿವರಿಸಿ ಸಭೆಯಲ್ಲಿ ಆರ್ಥಿಕ ನೆರವನ್ನು ನೀಡುವವರ ಹೆಸರನ್ನು ಸಂಗ್ರಹಿಸಲಾಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಕೆ.ಉಮೇಶ್‌ರವರು ಈಗಾಗಲೇ ಜೀರ್ಣೋದ್ದಾರದ ಬಗ್ಗೆ ಎಲ್ಲಾ ಸಮಿತಿಗಳು ಕಾರ್ಯ ನಿರ್ವಹಿಸುವ ಬಗ್ಗೆ ಸಭೆಗೆ ವಿವರಿಸಿದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್‌ರವರು ಅಷ್ಟಮಂಗಲದಲ್ಲಿ ಕಂಡು ಬಂದ ಸಮಸ್ಯೆಗಳಿಗೆ ವಿವಿಧ ದೇವಸ್ಥಾನಗಳಿಗೆ ತೆರಳಿ ಪರಿಹಾರರ್ಥವಾಗಿ ನಡೆಯುವ ಪೂಜಾ ಕಾರ್ಯಕ್ರಮದ ಬಗ್ಗೆ ಮತ್ತು ಆರ್ಥಿಕವಾಗಿ ಎಲ್ಲರೂ ಸಹಕರಿಸಬೇಕೆಂದು ಸಭೆಯಲ್ಲಿ ವಿನಂತಿಸಿದರು. ಜೀರ್ಣೋದ್ದಾರ ಸಮಿತಿ ಕೋಶಾಧಿಕಾರಿ ಹರೀಶ್ ರೈ ಉಬರಡ್ಕರವರು ಎಲ್ಲರನ್ನು ವಂದಿಸಿದರು.

LEAVE A REPLY

Please enter your comment!
Please enter your name here