ಮದ್ಯ ಮುಕ್ತ ಸಮಾಜದಿಂದ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ : ಕೆ ಜಿ ಬೋಪಯ್ಯ

0

ತಮಗೆ ಅರಿವಿಲ್ಲದೆ ಈ ಮಾದಕ ದ್ರವ್ಯಗಳ ಚಟಕ್ಕೆ ಒಳಗಾದ ಯುವ ಜನತೆ ಈ ದುಶ್ಚಟಗಳಿಂದ ಹೊರಬಂದು ಆರೋಗ್ಯಕರ ಸಮಾಜ ಮತ್ತು ಈ ಮೂಲಕ ಬಲಿಷ್ಠ ಭಾರತ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಮಾಜಿ ವಿಧಾನಸಭಾಧ್ಯಕ್ಷ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದರು.
ಅವರು ನ. ೨೬ ರಂದು ಸಂಪಾಜೆ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ೧೬೧೮ ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತ ಊರುಬೈಲುರವರು ಮಧ್ಯ ತ್ಯಜಿಸಿ ನವ ಜೀವನಕ್ಕೆ ಕಾಲಿರಿಸಿದ ಶಿಬಿರಾರ್ಥಿಗಳಿಗೆ ಶುಭ ಹಾರೈಸಿ ಮದ್ಯವರ್ಜನ ಶಿಬಿರದ ಯಶಸ್ಸಿಗೆ ಸಹಕರಿಸಿದ ಎಲ್ಲರನ್ನ ಸ್ಮರಿಸಿದರು.
ವೇದಿಕೆಯಲ್ಲಿ ಮಡಿಕೇರಿ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಅರುಣ್ ಬಾನಂಗಡ, ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಜಯಕುಮಾರ್ ಚಿದ್ಕಾರ್, ಹಿರಿಯರಾದ ಶ್ರೀಮತಿ ಇಂದಿರಾ ದೇವಿ ಪ್ರಸಾದ್, ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಬಿ.ಆರ್.ಶಿವರಾಮ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀಮತಿ ಲೀಲಾವತಿ,ತಿಮ್ಮಯ್ಯ ನಾಯ್ಕ್, ದಿನೇಶ್ ಉಪಸ್ಥಿತರಿದ್ದರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಹಲವು ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ 60 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಶಿಬಿರಾಧಿಕಾರಿ ದೇವಿ ಪ್ರಸಾದ್, ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ, ಶುಶ್ರೂಷಕಿ ಶ್ರೀಮತಿ ನೇತ್ರಾವತಿ ಶಿಬಿರದ ಜವಾಬ್ದಾರಿ ನಿರ್ವಹಿಸಿದ್ದರು.