ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ಕ೦ಪೆನಿಗೆ ಆಯ್ಕೆ

0

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ನಮಿತ್ ಬಿ.ಎಂ. ಮತ್ತು ಸುಹಾಸ್ ಎಂ., ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಗುಣಶೇಕರ್ ಕೆ. ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಗಗನ್‌ದೀಪ್ ಎಸ್. Kambala Solutions Pvt. Ltd. ಕಂಪೆನಿಗೆ, ಆಯ್ಕೆಯಾಗಿರುತ್ತಾರೆ.

ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.