ಎಲಿಮಲೆ : ರಕ್ತದಾನ ಶಿಬಿರ, ರಕ್ತವರ್ಗೀಕರಣ ಹಾಗೂ ಮಾಹಿತಿ ಶಿಬಿರ

0
90

ಚಿರಾಯು ಆರ್ಟ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಗ್ರಾಮ ಪಂಚಾಯತ್ ದೇವಚಳ್ಳ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ, ರಕ್ತವರ್ಗೀಕರಣ ಹಾಗೂ ಮಾಹಿತಿ ಶಿಬಿರವು ಸರಕಾರಿ ಪ್ರೌಡಶಾಲೆ ಎಲಿಮಲೆಯಲ್ಲಿ ಡಿ. ೪ರಂದು ನಡೆಯಿತು.
ಸುಳ್ಯ ತಹಶೀಲ್ದಾರ್ ಕು. ಅನಿತಾಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೇವಚಳ್ಳ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪುತ್ತೂರು ಡಿ.ವೈ.ಎಸ್.ಪಿ. ವೀರಯ್ಯ ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ್ ಉಪಸ್ಥಿತರಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ರಕ್ತದಾನ ಮಾಹಿತಿ ನೀಡಿದರು.

p>

ಮೈತ್ರೇಯ ಕ್ಲಿನಿಕ್ ಎಲಿಮಲೆಯ ಡಾ. ಚೈತ್ರಭಾನು, ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ದೊಡ್ಡಣ್ಣ ಬರೆಮೇಲು, ಯುವಜನಾ ಸೇವಾ ಸಂಸ್ಥೆ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಜಯಂತ ಹರ್ಲ್ಲಡ್ಕ , ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಇದರ ಅಧ್ಯಕ್ಷ ಚಂದ್ರಶೇಖರ ಕಡೋಡಿ ಗೌರವ ಉಪಸ್ಥಿತರಿದ್ದರು.
ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡಿದರು. ರಾಜೇಶ್ ಅಂಬೆಕಲ್ಲು ಸ್ವಾಗತಿಸಿ, ಕಿರಣ್ ಗುಡ್ಡೆಮನೆ ವಂದಿಸಿದರು. ಮುರಳೀಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here