ಕುಕ್ಕೆ ಸುಬ್ರಹ್ಮಣ್ಯ; ದೈವಗಳ ನಡಾವಳಿ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಡಿ.6 ಮುಂಜಾನೆ ದೈವಗಳ ನಡಾವಳಿ ಜರುಗಿತು.
ಡಿ.5ರ ರಾತ್ರಿ ದೀಪಾರಾಧನೆಯುಕ್ತ ಪಾಲಕಿ ಉತ್ಸವ ನಡೆದು, ಕ್ಷೇತ್ರದ ದೈವಗಳಿಗೆ ಗೋಪುರ ನಡಾವಳಿ ಜರುಗಿತು. ಕ್ಷೇತ್ರದ ರಕ್ಷಣಾ ದೈವಗಳಿಗೆ ಕೊಡುವ ಕಟ್ಟುಕಟ್ಟಲೆಯ ಕೋಲ ಮತ್ತು ಪರ್ವಗಳನ್ನೊಳಗೊಂಡ ಗೋಪುರ ನಡಾವಳಿ ನೆರವೇರಿತು.

ಮುಂಜಾನೆ ಪುರುಷರಾಯ ದೈವ ಕುಮಾರಧಾರ ನದಿಗೆ ತೆರಳಿ ಮತ್ಸ್ಯ ತೀರ್ಥದಲ್ಲಿ ಪವಿತ್ರ ಮೀನುಗಳಿಗೆ ಅಕ್ಕಿ ಹಾಕುವ ಮೂಲಕ ಆಹಾರ ನೀಡಿ ಹರಸಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ರಾಂ ಸುಳ್ಳಿ ಸೇರಿದಂತೆ ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಧಿಕಾರಿಗಳು, ಕ್ಷೇತ್ರದ ಭಕ್ತರು, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪೋಟೋ: ಪ್ರತಿರೂಪ ಸುಬ್ರಹ್ಮಣ್ಯ