ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಿವಿಲ್ ಇಂಜಿನಿಯರಿಂಗ್ ಆಸೋಸಿಯೇಶನ್‌ನಲ್ಲಿ
ಫ್ರೆಶರ್‍ಸ್ ಡೆ ಆಚರಣೆ

0

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗವು ಹೊಸದಾಗಿ ಪ್ರವೇಶ ಪಡೆದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳನ್ನು ACE ಇದರ ವತಿಯಿಂದ ನಡೆಸಲಾದ “Aakar-2022” ಎನ್ನುವ ಕಾರ್ಯಕ್ರಮದಲ್ಲಿ ಸ್ವಾಗತಿಸಲಾಯಿತು. ಭಾರತ್ ಗ್ರಾಮ ಸಂಪರ್ಕ ನಿರ್ಮಾಣ, ಸುಳ್ಯ ಇದರ ಇಂಜಿನಿಯರ್ ಪತಂಜಲಿ ಭಾರಧ್ವಾಜ್ ಅವರು ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪತಂಜಲಿ ಭಾರಧ್ವಾಜ್ ಇವರು ಮುಂದಿನ ದಿನಗಳಲ್ಲಿ ಸಿವಿಲ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಒದಗಿ ಬರಲಿದೆ ಎನ್ನುವ ಭರವಸೆಯ ಮಾತುಗಳನ್ನಾಡಿದರು. ಬಳಿಕ “A Glance at Civil Engineering”ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರುಗಳಿಗೆ ತಾಂತ್ರಿಕ ಉಪನ್ಯಾಸವನ್ನು ನೀಡಿದರು.

ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ. ಯವರು ಮಾತಾನಾಡುತ್ತಾ ಅತ್ಯುತ್ತಮ ಗುಣಮಟ್ಟದ ವಿದ್ಯಾಭ್ಯಾಸವನ್ನು ನೀಡುತ್ತಿರುವ ಕೆ.ವಿ.ಜಿ. ವಿದ್ಯಾಸಂಸ್ಥೆಯನ್ನು ಅರಸಿಕೊಂಡು ವಿದ್ಯಾರ್ಥಿಗಳು ಬರುತ್ತಿರುವುದು ಸಂಸ್ಥೆಗೆ ಒಂದು ಹೆಮ್ಮೆಯ ವಿಚಾರ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಬೋದಕ, ಬೋದಕೇತರ ವೃಂದದವರು ಉತ್ತಮ ರೀತಿಯ ಶಿಕ್ಷಣ ನೀಡುವುದರ ಜೊತೆಗೆ ನೌಕರಿಯನ್ನು ನೀಡುವಲ್ಲಿ ಶ್ರಮಿಸುತ್ತಿರುವುದನ್ನು ಅಭಿನಂದಿಸಿದರು. ಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಯವರು ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ವಿದ್ಯಾರ್ಜನೆಯನ್ನು ಮಾಡಿ ನೌಕರಿಯನ್ನು ಪಡೆಯುವಲ್ಲಿ ಯಶಸ್ವಿಯಾಗಲೆಂದು ಹಾರೈಸಿದರು. ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಶನ್‌ನ ಉಪಾಧ್ಯಕ್ಷರಾದ ಅಂತಿಮ ವರ್ಷದ ವಿದ್ಯಾರ್ಥಿ ಸುಹಾಸ್ ಕೆ.ಪಿ. ಸ್ವಾಗತಿಸಿ, ಅಸೋಸಿಯೇಶನ ಪ್ರಧಾನ ಕಾರ್ಯದರ್ಶಿ ವೈಷ್ಣವಿ ನೆಡ್ಚಿಲ್ ೨೦೨೧-೨೨ನೇ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿದರು. ಅಸೋಸಿಯೇಶನ್‌ನ ಸದಸ್ಯರಾದ ಚೇತನ್ ಎನ್. ವಂದಿಸಿದರು. ಕಾಲೇಜಿನ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪುನೀತ್ ಆರ್., ಪವನ್ ಕುಮಾರ್ ಮತ್ತು ಪ್ರಾಧ್ಯಾಪಕರಾದ ಪ್ರೊ. ಅಶ್ವಿಜ ಕೆ.ಸಿ. ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಎ., ಪ್ರೊ. ಅರುಣ್ ಕುಮಾರ್ ಹೆಚ್., ಕಾರ್ಯಕ್ರಮದ ಸಂಯೋಜಕರಾದ ಪ್ರೊ. ಕೃಷ್ಣರಾಜ್ ಎಂ.ವಿ., ಕೋಶಾಧಿಕಾರಿ ಪ್ರೊ. ಅಜಿತ್ ಬಿ.ಟಿ. ಮತ್ತು ಸಿವಿಲ್ ವಿಭಾಗದ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂಧಿವರ್ಗದವರು ಉಪಸ್ಥಿತರಿದ್ದರು. ಭೋಜನದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು.