ಸುಳ್ಯದಲ್ಲಿ ಪಶು ಸಂಗೋಪನಾ ಇಲಾಖೆಯಿಂದ ಉಚಿತ ನಾಟಿ ಕೋಳಿ ವಿತರಣೆ, 20 ಕೋಳಿ ಮರಿಯಂತೆ 106 ಮಂದಿ ಫಲಾನುಭವಿಗಳಿಗೆ ಕೊಡುಗೆ

0

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ, ಕರ್ನಾಟಕ ಸಹಕಾರ ಕುಕ್ಕುಟ ಮಹಾ ಮಂಡಳಿ ನಿಗಮ ಇದರ ಆಶ್ರಯದಲ್ಲಿ ಉಚಿತ ನಾಟಿ ಕೋಳಿ ಮರಿಗಳ ವಿತರಣೆ ನಡೆಯಿತು.

ಒಟ್ಟು 106 ಮಂದಿ ಫಲಾನುಭವಿಗಳಿಗೆ ನಾಟಿ ಕೋಳಿ ವಿತರಿಸಲಾಗಿದ್ದು, ಸಚಿವ ಎಸ್.ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ.ತೀರ್ಥರಾಮ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಉಪಸ್ಥಿತರಿದ್ದರು. ಪಶು ಸಂಗೋಪನೆ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ. ನಿತಿನ್ ಪ್ರಭು ಕಾರ್ಯಕ್ರಮ ನಿರ್ವಹಿಸಿದರು.