ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ, ಕನ್ನಡ ಭುವನೇಶ್ವರಿಯ ಮೆರವಣಿಗೆ ಆರಂಭ

0

ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ನಮ್ಮೇಳನಕ್ಕೆ ಚಾಲನೆ ನೀಡಲಾಗಿದೆ‌. ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕರಾದ ಕೆ.ಆರ್.ಗಂಗಾಧರ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಭುವನೇಶ್ವರಿ ಮೆರವಣಿಗೆ ಮತ್ತು ಸಮ್ಮೇಳನಾಧ್ಯಕ್ಷರ ಮೆರವಣಿಗೆಯೊಂದಿಗೆ ಚಾಲನೆ ದೊರೆತಿದೆ.

ಸಂಪಾಜೆ ಸೊಸೈಟಿ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶೀನಾಥ್, ತಾಲೂಕು ಅಧ್ಯಕ್ಷ ಚಂದ್ರಶೇಖರ ಪೇರಾಲು, ಸ್ವಾಗತ ಸಮಿತಿ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.