ಡಿ.13 ರಂದು ಸುಳ್ಯದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ

0

ದ.ಕ.ಜಿ.ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಡಿ.೧೩ರಂದು ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಡಿ.೯ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರತಿಭಾ ಕಾರಂಜಿ ಜಿಲ್ಲಾ ನೋಡೆಲ್ ಶ್ರೀಮತಿ ಶೋಭಾ ಎನ್, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯರು ಕಾರ್ಯಕ್ರಮದ ಕುರಿತು ವಿವರ ನೀಡಿದರು.
“ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ೩೮೦ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ೪೫ ರಷ್ಟು ಸ್ಪರ್ಧೆಗಳು ನಡೆಯಲಿದ್ದು ೧೨ ವೇದಿಕೆಗಳಲ್ಲಿ ಸ್ಪರ್ಧೆಗಳು ನಡೆಯುವುದು. ೪೫ ಮಂದಿ ತೀರ್ಪುಗಾರರು ಆಗಮಿಸಲಿದ್ದು ೬೦ – ೭೦ ರಷ್ಟು ಮಂದಿ ನಿರ್ವಾಹಕರು ಇರುತ್ತಾರೆ. ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ನಗದು ಪುರಸ್ಕಾರ ನೀಡಲಾಗುವುದು. ಹಾಗೂ ಪ್ರತಿಭಾ ಕಾರಂಜಿಯ ಜವಾಬ್ದಾರಿ ವಹಿಸಿಕೊಂಡಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ನೆನಪಿನ ಕಾಣಿಕೆಯನ್ನು ನೀಡಲಾಗುವುದು. ಅತೀ ಹೆಚ್ಚು ಅಂಕ ಪಡೆದ ಶಾಲೆಗಳಿಗೆ ಸಮಗ್ರ ಬಹುಮಾನವನ್ನು ನೀಡಲಾಗುವುದು” ಎಂದವರು ತಿಳಿಸಿದರು.


ಸಚಿವರುಗಳಾದ ವಿ.ಸುನಿಲ್ ಕುಮಾರ್, ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಅಧ್ಯಕ್ಷರು, ನಿಗಮದ ಅಧ್ಯಕ್ಷರುಗಳು ಹೀಗೆ ಹಲವು ಮಂದಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಯಶಸ್ಸಿಗಾಗಿ ಸರ್ವ ಸಿದ್ಧತೆಗಳನ್ನು ಮಾಡಲಾಗಿದೆ ಎಂದವರು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಎಸ್‌ಡಿಎಂಸಿ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ, ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಇದ್ದರು.